ಇಸ್ರೇಲ್ :ಹಮಾಸ್ ಭಯೋತ್ಪಾದಕರೊಂದಿಗಿನ ಗಾಜಾ ಕದನ ವಿರಾಮ ಮಾತುಕತೆ ವಿಫಲವಾಗಿದೆ. ಇದರಿಂದ ಆಕ್ರೋಶಗೊಂಡ ಇಸ್ರೇಲ್ ಸೇನೆಯು ಗಾಜಾದ ಮೇಲೆ ವಿನಾಶಕಾರಿ ದಾಳಿಯನ್ನು ಪ್ರಾರಂಭಿಸಿದೆ. ಶನಿವಾರ ಗಾಜಾದಲ್ಲಿ ಇಸ್ರೇಲಿ ದಾಳಿಯಲ್ಲಿ ಕನಿಷ್ಠ 110 ಪ್ಯಾಲೆಸ್ತೀನಿಯನ್ನರು ಸಾವನ್ನಪ್ಪಿದ್ದಾರೆ ಎಂದು ಗಾಜಾದ ವೈದ್ಯಕೀಯ ಮೂಲಗಳನ್ನು ಉಲ್ಲೇಖಿಸಿ ಅಲ್ಜಜೀರಾ ವರದಿ ಮಾಡಿದೆ.
ಅದರಲ್ಲಿ 34 ಜನರು ದಕ್ಷಿಣ ರಫಾದಲ್ಲಿ ಸಾವನ್ನಪ್ಪಿದ್ದಾರೆ. ಅವರೆಲ್ಲರೂ ಗಾಜಾ ಹ್ಯುಮನಿಟೇರಿಯನ್ ಫೌಂಡೇಷನ್ (GHF) ಹೊರಗೆ ಆಹಾರ ಸಹಾಯಕ್ಕಾಗಿ ಕಾಯುತ್ತಿದ್ದರು. ಇಸ್ರೇಲ್ ಸೈನ್ಯವು ಯಾವುದೇ ಎಚ್ಚರಿಕೆ ನೀಡದೆ ಜನರ ಮೇಲೆ ಗುಂಡು ಹಾರಿಸಲು ಪ್ರಾರಂಭಿಸಿತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಅಮೆರಿಕ, ಕತಾರ್ ಮತ್ತು ಈಜಿಪ್ಟ್ ಮಧ್ಯಸ್ಥಿಕೆಯಲ್ಲಿ ಇಸ್ರೇಲ್ ಮತ್ತು ಹಮಾಸ್ ನಡುವಿನ ಕದನ ವಿರಾಮ ಪ್ರಯತ್ನಗಳು ವಿಫಲವಾಗಿವೆ. ಇಂತಹ ಪರಿಸ್ಥಿತಿಯಲ್ಲಿ, ಇಸ್ರೇಲ್ ಸೈನ್ಯವು ಮೊದಲಿಗಿಂತ ಹೆಚ್ಚು ಆಕ್ರಮಣಕಾರಿಯಾಗಿ ದಾಳಿ ಮಾಡುತ್ತಿದೆ.
ಗಾಜಾದ ಸಂಪೂರ್ಣ ಜನಸಂಖ್ಯೆಯನ್ನು ಬೇರೆಡೆಗೆ ಸ್ಥಳಾಂತರಿಸಲು ಇಸ್ರೇಲ್ ಯೋಜಿಸಿದೆ. ಹಮಾಸ್ ಮತ್ತು ಪ್ಯಾಲೆಸ್ಟೀನಿಯನ್ನರು ಇಸ್ರೇಲ್ ಅನ್ನು ವ್ಯಾಪಕವಾಗಿ ಟೀಕಿಸುತ್ತಿದ್ದಾರೆ.