ಬೆಂಗಳೂರು: ರಾಜ್ಯದಲ್ಲಿ ಬಿರು ಬಿಸಿಲಿನ ನಡುವೆ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಿದೆ. ಚಿಕ್ಕಮಗಳೂರು, ಉಡುಪಿ, ಶಿವಮೊಗ್ಗ, ದಾವಣಗೆರೆ, ವಿಜಯನಗರ, ಹಾವೇರಿ, ಗದಗ ಜಿಲ್ಲೆಯ ಹಲವು ಕಡೆಗಳಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗಿದೆ.
ಇನ್ನು ಶುಕ್ರವಾರದಿಂದ ಒಂದು ವಾರ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಶ್ರೀಲಂಕಾ, ಬಂಗಾಳಕೊಲ್ಲಿ ಭಾಗದಲ್ಲಿ ಮಳೆ ಮಾರುತಗಳು ಸೃಷ್ಟಿಯಾಗುತ್ತಿವೆ. ಬಿಸಿಲು ಕೂನ ಹೆಚ್ಚಳವಾಗುತ್ತಿದೆ. ಇದರಿಂದಾಗಿ ಮಳೆಯಾಗುವ ಸಾಧ್ಯತೆ ಇದೆ.