ಬೆಂಗಳೂರು: ನಗರದಲ್ಲಿರುವ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಒಡೆತನದ ಐಷಾರಾಮಿ ಪಬ್ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬುಧವಾರ ದಾಳಿ ನಡೆಸಿದೆ.
ಬೆಂಗಳೂರಿನ ಚರ್ಚ್ ಸ್ಟ್ರೀಟ್‌ನಲ್ಲಿರುವ ಜನಪ್ರಿಯ ಬ್ಯಾಸ್ಟಿಯನ್ ಪಬ್ ಮೇಲೆ ಐಟಿ ಮುಂಬೈ ಐಟಿ ಅಧಿಕಾರಿಗಳ ತಂಡ ದಾಳಿ ನಡೆಸಿ, ಪ್ರಮುಖ ದಾಖಲೆಗಳ ಪರಿಶೀಲನೆ ನಡೆಸಿದೆ. ಈ ದಾಳಿಯ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ.
ಶಿಲ್ಪಾ ಶೆಟ್ಟಿ ಮತ್ತು ಅವರ ಪತಿ ಈಗಾಗಲೇ ಹಲವು ಪ್ರಕರಣಗಳಲ್ಲಿ ವಿಚಾರಣೆಯನ್ನು ಎದುರಿಸುತ್ತಿದ್ದಾರೆ. ಈ ಐಟಿ ದಾಳಿಯು ಆ ಹಿಂದಿನ ಪ್ರಕರಣಗಳ ಮುಂದುವರಿದ ಭಾಗವೇ ಅಥವಾ ಪಬ್‌ಗೆ ಸಂಬಂಧಿಸಿದ ಇತರ ವಿವಾದಗಳಿಗೆ ಸಂಬಂಧಿಸಿದ್ದೇ ಎಂಬುದು ತಿಳಿದುಬಂದಿಲ್ಲ.
































