ಕೊಪ್ಪಳ್ಳ: ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ 15 ರಿಂದ 20 ಸ್ಥಾನಗಳನ್ನು ಗೆಲ್ಲಲಿದೆ’ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ಕೊಪ್ಪಳದಲ್ಲಿ ಮಾತನಾಡಿ, ರಾಜ್ಯದಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 136 ಸ್ಥಾನ ಗೆದ್ದಿದೆ. ನಮ್ಮಲ್ಲಿ ಕಾಂಗ್ರೆಸ್ ಅಲೆ ಜಾಸ್ತಿ ಇದೆ.
ಹಾಗಾಗಿ ಕನಿಷ್ಠ 20 ಕ್ಷೇತ್ರಗಳಲ್ಲಿ ಜಯಿಸುವುದು ಪಕ್ಕಾ ಆಗಿದೆ ಎಂದಿದ್ದಾರೆ. ಅಲ್ಲದೆ, ಲೋಕಸಭೆ ಚುನಾವಣೆಗೆ ನಾನು ಸ್ಪರ್ಧಿಸುವ ಬಗ್ಗೆ ಚರ್ಚೆ ನಡೆಸಿಲ್ಲ ಎಂದು ತಿಳಿಸಿದ್ದಾರೆ.