ನವದೆಹಲಿ : ಭಾರತ-ಪಾಕಿಸ್ತಾನ ಕದನ ವಿರಾಮಕ್ಕೆ ಅಮೆರಿಕ ಮಧ್ಯಸ್ಥಿಕೆ ವಹಿಸಿದೆ ಎಂಬ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಯನ್ನು ಕೇಂದ್ರ ವಿದೇಶಾಂಗ ಸಚಿವ ಎಸ್. ಜೈಶಂಕರ್ ಮತ್ತೊಮ್ಮೆ ನಿರಾಕರಿಸಿದ್ದಾರೆ.
ಇದು ಎರಡೂ ದೇಶಗಳ ನಡುವಿನ ನೇರ ಮಾತುಕತೆಯ ಮೂಲಕ ನಡೆದಿದ್ದು ಎಂದು ಅವರು ಸ್ಪಷ್ಟನೆ ನೀಡಿದ್ದಾರೆ. ಮಾತುಕತೆಗಳ ಸಮಯದಲ್ಲಿ ಅಮೆರಿಕದ ಹಸ್ತಕ್ಷೇಪವಾಗಿಲ್ಲ ಎಂದು ಅವರು ಹೇಳಿದ್ದಾರೆ.
ಡಚ್ ಸಾರ್ವಜನಿಕ ಪ್ರಸಾರಕ ಎನ್ಒಎಸ್ ಜೊತೆ ಮಾತನಾಡಿದ ವಿದೇಶಾಂಗ ಸಚಿವ ಎಸ್. ಜೈಶಂಕರ್, ಭಾರತ ಮತ್ತು ಪಾಕಿಸ್ತಾನ ನಡುವಿನ ಕದನ ವಿರಾಮ ಒಪ್ಪಂದಕ್ಕೆ ಅಮೆರಿಕ ಮಧ್ಯಸ್ಥಿಕೆ ವಹಿಸಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಪುನರಾವರ್ತಿತ ಹೇಳಿಕೆಗಳನ್ನು ನಿರಾಕರಿಸಿದರು.
ಯುದ್ಧ ನಿಲ್ಲಿಸುವುದು ಎರಡೂ ದೇಶಗಳ ನಡುವೆ ನೇರವಾಗಿ ಮಾತುಕತೆ ಮೂಲಕ ಮಾಡಿಕೊಳ್ಳಲಾದ ದ್ವಿಪಕ್ಷೀಯ ಒಪ್ಪಂದವಾಗಿದ್ದು, ಯಾವುದೇ ಮೂರನೇ ವ್ಯಕ್ತಿಯ ಮಧ್ಯಸ್ಥಿಕೆ ಇಲ್ಲದೆ ಈ ಒಪ್ಪಂದ ನಡೆದಿದೆ ಎಂದು ಹೇಳಿದ್ದಾರೆ.