ಬಿಹಾರದಲ್ಲಿ ಖಾತೆ ತೆರೆಯದ ಪ್ರಶಾಂತ್ ಕಿಶೋರ್ ನೇತೃತ್ವದ ‘ಜನ್ ಸೂರಜ್’ ಪಕ್ಷ

WhatsApp
Telegram
Facebook
Twitter
LinkedIn

ಪಾಟ್ನಾ : ಚುನಾವಣಾ ಚಾಣಕ್ಯ, ರಾಜಕೀಯ ತಂತ್ರಗಾರ ಎಂದೇ ಗುರುತಿಸಿಕೊಂಡಿದ್ದ ಪ್ರಶಾಂತ್ ಕಿಶೋರ್ ನೇತೃತ್ವದ ‘ಜನ್ ಸೂರಜ್’ ಪಕ್ಷವು ಈ ಬಾರಿ ಬಿಹಾರ ಉಪ ಚುನಾವಣೆಯಲ್ಲಿ ಖಾತೆ ತೆರೆಯುವಲ್ಲಿ ವಿಫಲವಾಗಿದೆ.

ಈ ಬಾರಿ ಒಟ್ಟು 14 ರಾಜ್ಯಗಳ ೪೮ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಿತು. ಈ ಪೈಕಿ ಬಿಹಾರದ ತರಾರಿ, ರಾಮಗಢ, ಬೆಳಗಂಜ್ ಮತ್ತು ಇಮಾಮ್‌ಗಂಜ್ ಕ್ಷೇತ್ರಗಳಿಗೂ ಉಪಚುನಾವಣೆ ನಡೆದಿದೆ. ಈ ಉಪಚುನಾವಣೆಯಲ್ಲಿ ಸ್ಪರ್ಧಿಸಿದ್ದ ಜನ್ ಸೂರಜ್ ಅಭ್ಯರ್ಥಿಗಳು ಸೋಲನುಭವಿಸಿದ್ದಾರೆ.

ಪ್ರಶಾಂತ್ ಕಿಶೋರ್ ಅವರು ಚುನಾವಣಾ ತಂತ್ರಗಾರ ಎಂದೇ ಖ್ಯಾತಿ ಪಡೆದಿದ್ದಾರೆ. ಆದರೆ ಇದೀಗ ಅವರ ನೇತೃತ್ವದ ಪಕ್ಷವು ಖಾತೆ ತೆರೆಯುವಲ್ಲಿ ವಿಫಲವಾಗಿದ್ದು, ಇದು ಪ್ರಶಾಂತ್ ಕಿಶೋರ್‌ಗೆ ಭಾರಿ ಮುಖಭಂಗವನ್ನುಂಟು ಮಾಡಿದೆ.

BC Suddi   About Us
For Feedback - [email protected]

Related News

LATEST Post

WhatsApp Icon Telegram Icon