ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಉಡುವಳ್ಳಿಯ ಜವಾಹರ್ ನವೋದಯ ವಿದ್ಯಾಲಯ (ಮಾನವ ಸಂಪನ್ಮೂಲ ಇಲಾಖೆ, ಭಾರತ ಸರ್ಕಾರ) 2026-27ನೇ ಸಾಲಿಗೆ 9 ಮತ್ತು 11ನೇ ತರಗತಿ ಪ್ರವೇಶಾತಿಗೆ ಜಿಲ್ಲೆಯ ಎಲ್ಲಾ ಸರ್ಕಾರಿ ಮತ್ತು ಮಾನ್ಯತೆ ಪಡೆದ ಶಾಲೆಗಳ ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 23 ಕೊನೆಯ ದಿನವಾಗಿದೆ.
9ನೇತರಗತಿ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು https://cbseitms.nic.in/2025/nvsix9/registrationclassIX/registrationclassIX ಹಾಗೂ 11ನೇ ತರಗತಿ ಪ್ರವೇಶಕ್ಕೆ https://cbseitms.nic.in/2025/nvsix11/registrationclassXI/registrationclassXI ಈ ವೆಬ್‍ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಜಿಲ್ಲೆಯ ಖಾಯಂ ನಿವಾಸಿಯಾಗಿರಬೇಕು. ಚಿತ್ರದುರ್ಗ ಜಿಲ್ಲೆಯಲ್ಲಿರುವ ಸರ್ಕಾರಿ ಮತ್ತು ಸರ್ಕಾರದಿಂದ ಮಾನ್ಯತೆ ಪಡೆದ ಶಾಲೆಗಳಲ್ಲಿ 8 ಮತ್ತು 10ನೇ ತರಗತಿಯಲ್ಲಿ ಓದುತ್ತಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಆಯ್ಕೆ ಪರೀಕ್ಷೆಯನ್ನು 2026ರ ಫೆಬ್ರವರಿ 7ರಂದು ನಡೆಸಲಾಗುವುದು ಎಂದು ಹಿರಿಯೂರು ತಾಲ್ಲೂಕಿನ ಉಡುವಳ್ಳಿಯ ಜವಾಹರ್ ನವೋದಯ ವಿದ್ಯಾಲಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.