ಬೆಂಗಳೂರು: ಹೌದು ಪ್ರತಿಷ್ಠಿತ ಜಯದೇವ ಆಸ್ಪತ್ರೆಯ ನಿರ್ದೇಶಕರಾಗಿ ಡಾ. ಸಿ.ಎನ್. ಮಂಜುನಾಥ್ ಅವರನ್ನೇ ಮುಂದುವರೆಸಿ ಸರ್ಕಾರ ಆದೇಶ ಹೊರಡಿಸಿದೆ.
ಇದೇ ಜುಲೈ 19ಕ್ಕೆ ಅವರ ಸೇವಾವಧಿ ಮುಕ್ತಾಯವಾಗುತ್ತದೆ. ಕಲಬುರಗಿಯಲ್ಲಿ ಜಯದೇವ ಆಸ್ಪತ್ರೆಯ ನಿರ್ಮಾಣದ ಜವಾಬ್ದಾರಿಯಿಂದಾಗಿ ಅವರಿಗೆ ಇನ್ನು 6 ತಿಂಗಳವರೆಗೆ ಆಸ್ಪತ್ರೆಯ ನಿರ್ದೇಶಕರಾಗಿ ಮುಂದುವರೆಯುವಂತೆ ಆದೇಶಿಸಿದೆ. ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.