ಚೆನ್ನೈ: ಜಾರ್ಖಂಡ್ ಸರ್ಕಾರದ ಶಿಕ್ಷಣ ಸಚಿವ ಜಗರ್ನಾಥ್ ಮಹತೋ ಚೆನ್ನೈ ಆಸ್ಪತ್ರೆಯಲ್ಲಿ ನಿಧನರಾಗಿರುವ ಬಗ್ಗೆ ಸಿಎಂ ಹೇಮಂತ್ ಸೊರೇನ್ ಮಾಹಿತಿ ನೀಡಿದ್ದಾರೆ.
ಕೆಲವು ವರ್ಷಗಳಿಂದ ಅನಾರೋಗ್ಯ ಹಾಗೂ ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದ ಅವರಿಗೆ 2020ರ ನವೆಂಬರ್ನಲ್ಲಿ ಶ್ವಾಸಕೋಶ ಕಸಿ ಚಿಕಿತ್ಸೆ ಮಾಡಲಾಗಿತ್ತು.
ಮಹತೋ ಹಲವು ಬಾರಿ ಶಾಸಕನಾಗಿ ಆಯ್ಕೆಯಾಗಿದ್ದು, 2019ರಲ್ಲಿ ದುಮ್ರಿ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು.