ಲಕ್ನೋ : 2021 ರ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಅಲಹಾಬಾದ್ ಹೈಕೋರ್ಟ್ ಸ್ಥಳೀಯ ವಕೀಲ ಅಶೋಕ್ ಪಾಂಡೆಗೆ ವಕೀಲರ ನಿಲುವಂಗಿಯಿಲ್ಲದೆ ಮತ್ತು ಶರ್ಟ್ ಬಿಚ್ಚಿ ನ್ಯಾಯಾಲಯಕ್ಕೆ ಹಾಜರಾಗಿದ್ದಕ್ಕಾಗಿ ಆರು ತಿಂಗಳ ಜೈಲು ಶಿಕ್ಷೆ ವಿಧಿಸಿದೆ.
ಆರೋಪಗಳ ಗಂಭೀರತೆ, ಪಾಂಡೆ ಅವರ ಹಿಂದಿನ ನಡವಳಿಕೆ ಮತ್ತು ವಿಚಾರಣೆಯಲ್ಲಿ ಭಾಗವಹಿಸಲು ಅವರು ನಿರಾಕರಿಸಿದ್ದನ್ನು ಗಮನದಲ್ಲಿಟ್ಟುಕೊಂಡು “ಅನುಕರಣೀಯ ಶಿಕ್ಷೆ ಅಗತ್ಯ” ಎಂದು ನ್ಯಾಯಮೂರ್ತಿಗಳಾದ ವಿವೇಕ್ ಚೌಧರಿ ಮತ್ತು ಬಿ.ಆರ್. ಸಿಂಗ್ ಅವರನ್ನೊಳಗೊಂಡ ವಿಭಾಗೀಯ ಪೀಠ ಗುರುವಾರ ಹೇಳಿದೆ.
2,000 ರೂ. ದಂಡ ಮತ್ತು ದಂಡ ಪಾವತಿಸಲು ತಪ್ಪಿದಲ್ಲಿ ಒಂದು ತಿಂಗಳು ಹೆಚ್ಚುವರಿಯಾಗಿ ಜೈಲು ಶಿಕ್ಷೆ ವಿಧಿಸಲಾಗಿದೆ. ಪಾಂಡೆ ಅವರಿಗೆ ಲಕ್ನೋದ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಮುಂದೆ ಶರಣಾಗಲು ನಾಲ್ಕು ವಾರಗಳ ಕಾಲಾವಕಾಶ ನೀಡಲಾಗಿದೆ.
ಅಲಹಾಬಾದ್ ಹೈಕೋರ್ಟ್ ಮತ್ತು ಅದರ ಲಕ್ನೋ ಪೀಠದಲ್ಲಿ ವಕೀಲಿ ವೃತ್ತಿಯಿಂದ ಪಾಂಡೆ ಅವರನ್ನು ಏಕೆ ನಿರ್ಬಂಧಿಸಬಾರದು ಎಂದು ಪ್ರಶ್ನಿಸಿ ಪೀಠವು ಅವರಿಗೆ ಶೋಕಾಸ್ ನೋಟಿಸ್ ನೀಡಿದೆ. ಅವರು ಮೇ ಒಂದರವರೆಗೆ ಪ್ರತಿಕ್ರಿಯಿಸಲು ಅವಕಾಶವಿದೆ.