ಹೈದರಾಬಾದ್: ಭಾರತ್ ರಾಷ್ಟ್ರ ಸಮಿತಿ ಪಕ್ಷದಿಂದ ಅಮಾನತುಗೊಂಡಿದ್ದ ಕೆ ಕವಿತಾ ಅವರು ಇಂದು ಬುಧವಾರ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.
ಇದೇ ವೇಳೆ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೂ ಅವರು ರಾಜೀನಾಮೆ ಕೊಟ್ಟಿದ್ದಾರೆ. ಕವಿತಾ ಅವರು ಭಾರತ್ ರಾಷ್ಟ್ರ ಸಮಿತಿ ಸಂಸ್ಥಾಪಕ ಹಾಗೂ ಮಾಜಿ ತೆಲಂಗಾಣ ಸಿಎಂ ಕೆ ಚಂದ್ರಶೇಖರ್ ರಾವ್ ಅವರ ಮಗಳು. ತಮ್ಮನ್ನು ಬಿಆರ್ಎಸ್ ಪಕ್ಷದಿಂದ ದಿಢೀರನೇ ಉಚ್ಛಾಟನೆ ಮಾಡುವ ಕ್ರಮದಿಂದ ಬಹಳ ನೋವಾಯಿತು ಎಂದು ಕವಿತಾ ಅವರು ತಮ್ಮ ರಾಜೀನಾಮೆ ನಿರ್ಧಾರಕ್ಕೆ ಕಾರಣ ನೀಡಿದ್ದಾರೆ.
‘ಎಂಎಲ್ಸಿ ಸ್ಥಾನ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಪತ್ರಿಕಾ ಹೇಳಿಕೆಯಲ್ಲಿ ಕವಿತಾ ತಿಳಿಸಿದ್ದಾರೆ. ರಾಜೀನಾಮೆ ಪತ್ರವನ್ನು ಸಭಾಧ್ಯಕ್ಷರು ಹಾಗೂ ಕೆ. ಚಂದ್ರಶೇಖರ್ ರಾವ್ ಅವರಿಗೆ ಕಳುಹಿಸುತ್ತಿದ್ದೇನೆ ಎಂದು ಹೇಳಿರುವ ಕವಿತಾ, ತಾನು ಯಾವುದೇ ಪಕ್ಷದೊಂದಿಗೆ ಹೋಗುತ್ತಿಲ್ಲ. ತೆಲಂಗಾಣ ಜಾಗೃತಿ ಸದಸ್ಯರ ಜೊತೆ ಚರ್ಚಿಸಿ ಮುಂದಿನ ನಿರ್ಧಾರ ತೆಗೆದುಕೊಳ್ಳುವುದಾಗಿ ಸ್ಪಷ್ಟಪಡಿಸಿದ್ದಾರೆ.