ಬೆಂಗಳೂರು: ಕಾಗವಾಡ ಕಾಂಗ್ರೆಸ್ ಶಾಸಕ ರಾಜು ಕಾಗೆ ಅವರಿಗೆ ಕಾಂಗ್ರೆಸ್ ವರಿಷ್ಠರು ಶಾಕ್ ನೀಡಿದ್ದಾರೆ. ಅವರನ್ನು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಲಾಗಿದೆ.
ರಾಜು ಕಾಗೆ ಬದಲಾಗಿ ಅರುಣ್ ಪಾಟೀಲ್ ಅವರನ್ನು ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡುವಂತೆ ಎಐಸಿಸಿ ಪ್ರಧಾನಕಾರ್ಯದರ್ಶಿ ವೇಣುಗೋಪಾಲ್ ಸಿಎಂ ಸಿದ್ದರಾಮಯ್ಯ ಅವರಿಗೆ ಅಂತಿಮ ಪಟ್ಟಿ ರವಾನಿಸಿದ್ದಾರೆ.
ಈ ಮೂಲಕ ಸರ್ಕಾರದ ವಿರುದ್ಧ, ಪಕ್ಷದ ನಾಯಕರ ವಿರುದ್ಧ ನೇರವಾಗಿ ಮಾತನಡುವವರ ವಿರುದ್ಧ ಕಾಂಗ್ರೆಸ್ ಹೈಕಮಾಂಡ್ ಖಡಕ್ ಸಂದೇಶ ರವಾನಿಸಿದೆ.