ಕರ್ನಾಟಕ ಬ್ಯಾಂಕ್ ಪ್ರೊಬೆಷನರಿ ಆಫಿಸರ್ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆ ಆಕರ್ಷಕ ಸಂಬಳ, ವೃತ್ತಿ ಬೆಳವಣಿಗೆ ಮತ್ತು ವೃತ್ತಿಪರ ಅಭಿವೃದ್ಧಿಯೊಂದಿಗೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಭರವಸೆಯ ವೃತ್ತಿಜೀವನದ ಅವಕಾಶವನ್ನು ಒದಗಿಸುತ್ತದೆ. ಅರ್ಹ ಅಭ್ಯರ್ಥಿಗಳು ಡಿಸೆಂಬರ್ 10ರೊಳಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬೇಕು. ಡಿಸೆಂಬರ್ 22ರಂದು ನಿಗದಿಪಡಿಸಲಾದ ಲಿಖಿತ ಪರೀಕ್ಷೆಗೆ ಹಾಜರಾಗಬೇಕು.
ಆಯ್ಕೆಯಾದ ಅಭ್ಯರ್ಥಿಗಳು ಮಂಗಳೂರಿನಲ್ಲಿರುವ ಕರ್ನಾಟಕ ಬ್ಯಾಂಕ್ ಸಿಬ್ಬಂದಿ ತರಬೇತಿ ಕಾಲೇಜಿನಲ್ಲಿ ಅಥವಾ ಬೇರೆ ಯಾವುದೇ ಗೊತ್ತುಪಡಿಸಿದ ಸ್ಥಳದಲ್ಲಿ ಇಂಡಕ್ಷನ್ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೆ. ತರಬೇತಿ ವೆಚ್ಛವನ್ನು ಅಭ್ಯರ್ಥಿಗಳೇ ಭರಿಸಬೇಕು.
ಆನ್ಲೈನ್ ಪರೀಕ್ಷೆಯ ಬಳಿಕ ಸಂದರ್ಶನ ನಡೆಯಲಿದೆ. ಆಯ್ಕೆಯಾದ ಅಭ್ಯರ್ಥಿಗಳನ್ನು ಪ್ರೊಬೇಷನರಿ ಅಧಿಕಾರಿಗಳಾಗಿ (PO) 48,480 ರೂ. ಸಂಬಳದೊಂದಿಗೆ ನೇಮಕ ಮಾಡಿಕೊಳ್ಳಲಾಗುತ್ತದೆ.
ಕರ್ನಾಟಕ ಬ್ಯಾಂಕ್ನಲ್ಲಿ ಪ್ರೊಬೇಷನರಿ ಅಧಿಕಾರಿಗಳಾಗಿ (PO) ಸೇರಬಯಸುವ ಅಭ್ಯರ್ಥಿಗಳು ಅಧಿಕೃತ ಆನ್ಲೈನ್ ಪೋರ್ಟಲ್ ಮೂಲಕ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು. ಅರ್ಜಿ ಪೋರ್ಟಲ್ ತೆರೆದಿದ್ದು ಡಿಸೆಂಬರ್ 10ರಂದು ಮುಕ್ತಾಯಗೊಳ್ಳುತ್ತದೆ.
ಆಸಕ್ತ ಅಭ್ಯರ್ಥಿಗಳು ಕೊನೆಯ ಕ್ಷಣದ ಅಡಚಣೆಗಳನ್ನು ತಪ್ಪಿಸಲು, ತಮ್ಮ ನೋಂದಣಿ ಮತ್ತು ಅರ್ಜಿ ಶುಲ್ಕವನ್ನು ಗಡುವಿನ ಮೊದಲು ಪೂರ್ಣಗೊಳಿಸಬೇಕು. ಕರ್ನಾಟಕ ಬ್ಯಾಂಕ್ PO 2024 ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಮತ್ತು ಅರ್ಜಿ ಪ್ರಕ್ರಿಯೆಯನ್ನು ಸುಗಮವಾಗಿ ಪ್ರಾರಂಭಿಸಲು ಕೆಳೆ ಇರುವ ಲಿಂಕ್ ಅನ್ನು ಕ್ಲಿಕ್ ಮಾಡಿ.
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 48,480ರೂ. ಆರಂಭಿಕ ಮೂಲ ವೇತನ. ಮೆಟ್ರೋ ಕೇಂದ್ರಗಳಲ್ಲಿ, ಗರಿಷ್ಠ 85,920ರೂ. ವೇತನವನ್ನು ನೀಡಲಾಗುತ್ತದೆ. ಇದರಲ್ಲಿ ಭತ್ಯೆಗಳು ಮತ್ತು ಇತರ ಸೌಲಭ್ಯಗಳು ಸೇರಿವೆ. ಇದಲ್ಲದೆ, ವೃತ್ತಿ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಅವಕಾಶಗಳನ್ನು ಒದಗಿಸುತ್ತದೆ, ಇದು ಉದ್ಯೋಗಾಕಾಂಕ್ಷಿಗಳಿಗೆ ಲಾಭದಾಯಕ ಆಯ್ಕೆಯಾಗಿದೆ.