ಬೆಂಗಳೂರು: ಮದ್ಯ ಪ್ರಿಯರಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ಕೊಟ್ಟಿದ್ದು, ಬಿಯರ್ ದರವನ್ನು ಮತ್ತೆ ಏರಿಕೆ ಮಾಡಲು ನಿರ್ಧರಿಸಲಾಗಿದೆ… ಮದ್ಯದ ಘೋಷಿತ ಸ್ಲಾಬ್‌ಗಳನ್ನು ತರ್ಕಬದ್ಧಗೊಳಿಸುವ ಮೂಲಕ ನೆರೆ ರಾಜ್ಯಗಳ ಮದ್ಯದ ಬೆಲೆಗಳಿಗೆ ಅನುಗುಣವಾಗಿ IML, ಬಿಯರ್ ಸ್ಲಾಬ್ ಪರಿಷ್ಕರಣೆ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಬಜೆಟ್ನಲ್ಲಿ ಘೋಷಿಸಿದರು. 2023-24ನೇ ಸಾಲಿನ ಜನವರಿ ತಿಂಗಳ ಅಂತ್ಯದವರೆಗೆ, ಅಬಕಾರಿ ತೆರಿಗೆಯಿಂದ 28,181 ಕೋಟಿ ರೂ.ಗಳು ಸ್ವೀಕೃತವಾಗಿರುತ್ತದೆ. 2024-25ನೇ ಸಾಲಿಗೆ 38,525 ಕೋಟಿ ರೂ.ಗಳ ರಾಜಸ್ವ ಸಂಗ್ರಹಣೆ ಗುರಿಯನ್ನು ನಿಗದಿಪಡಿಸಲಾಗಿದೆ ಎಂದು ಮಾಹಿತಿ ನೀಡಿದರು.
