ಬೆಂಗಳೂರು: ಕರ್ನಾಟಕದ ಪೊಲೀಸ್ ಮಹಾನಿರ್ದೇಶಕರಾಗಿ ಹಿರಿಯ ಐಪಿಎಸ್ ಅಧಿಕಾರಿ ಎಂ ಸಲೀಂ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಐಪಿಎಸ್ ಅಧಿಕಾರಿ ಡಾ.ಎಂ.ಎ ಸಲೀಂ ಅವರನ್ನು ರಾಜ್ಯ ಪೊಲೀಸ್ ಮುಖ್ಯಸ್ಥರಾಗಿ ನೇಮಿಸುವ ರಾಜ್ಯ ಸರ್ಕಾರದ ನಡೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದ ಬೆನ್ನಲ್ಲೇ ರಾಜ್ಯ ಸರ್ಕಾರ ಈ ಆದೇಶ ಹೊರಡಿಸಿದೆ.
ಯುಪಿಎಸ್‌ಸಿಯಿಂದ ಆಯ್ಕೆ ಪಟ್ಟಿ ಬಂದ ಒಂದು ವಾರದೊಳಗೆ ನಿಯಮಿತ ಡಿಜಿಪಿಯನ್ನು ನೇಮಿಸಲಾಗುವುದು ಎಂದು ಸರ್ಕಾರ ನ್ಯಾಯಾಲಯಕ್ಕೆ ತಿಳಿಸಿತ್ತು. ಅದರಂತೆ ಇದೀಗ ಹಿರಿಯ ಐಪಿಎಸ್ ಅಧಿಕಾರಿ ಎಂ ಸಲೀಂ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
1993 ರ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾದ ಡಾ. ಸಲೀಂ ಅವರು ಅಲೋಕ್ ಮೋಹನ್ ನಿವೃತ್ತರಾದ ನಂತರ ಡಿಜಿಪಿ ಆಗಿ ಅಧಿಕಾರ ವಹಿಸಿಕೊಂಡರು.
ಡಾ. ಸಲೀಂ ಪ್ರಸ್ತುತ ಸಿಐಡಿಯ ಡಿಜಿಪಿ ಆಗಿದ್ದಾರೆ. ಇದರ ಜೊತೆಗೆ ರಾಜ್ಯದ ಡಿಜಿಪಿ ಮತ್ತು ಐಜಿಪಿಯ ಹೆಚ್ಚುವರಿ ಜವಾಬ್ದಾರಿಯನ್ನು ಸಹ ಹೊಂದಿದ್ದಾರೆ. ಹೈಕೋರ್ಟ್ ಈ ಅರ್ಜಿಯನ್ನು ವಜಾ ಮಾಡಿದೆ. ಸರ್ಕಾರವು ಶೀಘ್ರದಲ್ಲೇ ಡಿಜಿಪಿ ಹುದ್ದೆಗೆ ನೇಮಕಾತಿ ಮಾಡುವುದಾಗಿ ಹೇಳಿತ್ತು.