ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಫಲಿತಾಂಶ ಹೊರಬೀಳುತ್ತಿದ್ದು, ಆರಂಭಿಕ ಟ್ರೆಂಡ್ ಪ್ರಕಾರ ಕಾಂಗ್ರೆಸ್ 100ಕ್ಕೂ ಕ್ಷೇತ್ರಗಳಲ್ಲಿ ಮುನ್ನಡೆ ಗಳಿಸಿದೆ. ಅತ್ತ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಸಂಭ್ರಮ ಮನೆ ಮಾಡಿದೆ.
ಕರ್ನಾಟಕ ವಿಧಾನಸಭೆ ಚುನಾವಣೆ: ಫಲಿತಾಂಶಕ್ಕೆ ಕ್ಷಣಗಣನೆ; ಅತಂತ್ರವಾಗಲಿದೆ ಚುನಾವಣಾ ಫಲಿತಾಂಶ
ಈ ಕುರಿತು ‘ಎಎನ್‌ಐ’ ಟ್ವೀಟ್ ಮಾಡಿದೆ. ದೆಹಲಿಯ ಎಐಸಿಸಿ ಕೇಂದ್ರ ಕಚೇರಿಯಲ್ಲಿ ಸೇರಿದ ಕಾರ್ಯಕರ್ತರು ಸಂಭ್ರಮ ಆಚರಿಸಿಕೊಳ್ಳುತ್ತಿದ್ದಾರೆ. ಬೆಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲೂ ಸಂಭ್ರಮ ಮನೆ ಮಾಡಿದೆ. ಮತ ಎಣಿಕೆ ಹೊರಗಡೆ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಿಸುತ್ತಿದ್ದಾರೆ. ಈಗಿನ ಟ್ರೆಂಡ್ ಪ್ರಕಾರ (ಬೆಳಗ್ಗೆ 9.50) ಕಾಂಗ್ರೆಸ್ 117 ಕ್ಷೇತ್ರಗಳಲ್ಲಿ ಮುನ್ನಡೆ ಗಳಿಸಿದೆ. ಬಿಜೆಪಿ 76, ಜೆಡಿಎಸ್ 26 ಹಾಗೂ ಇತರರು 15 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.