ನವದೆಹಲಿ: ಕರ್ನಾಟಕ ವಿಧಾನಸಭೆಯಲ್ಲಿ ಭಾರೀ ಗದ್ದಲ ಎಬ್ಬಿಸಿರುವ ಹನಿಟ್ರ್ಯಾಪ್ ಪ್ರಕರಣ ಇದೀಗ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.
ಕರ್ನಾಟಕದಲ್ಲಿ ನಡೆದಿದೆ ಎನ್ನಲಾದ ಹನಿ ಟ್ರ್ಯಾಪ್ ಪ್ರಕರಣ ಕುರಿತು ತನಿಖೆಗೆ ಆಗ್ರಹಿಸಿ ಸುಪ್ರೀಂ ಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಾಗಿದೆ.
ಈ ವಿಷಯವನ್ನು ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸಂಜೀವ್ ಖನ್ನಾ ಅವರ ಮುಂದೆ ಉಲ್ಲೇಖಿಸಲಾಗಿದ್ದು, ಅವರು ನಾಳೆ ಪಟ್ಟಿ ಮಾಡಲಾಗುವುದು ಎಂದು ಹೇಳಿದರು.
ಕರ್ನಾಟಕದ ಹನಿ ಟ್ರ್ಯಾಪಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಸಚಿವರು ಮತ್ತು ಶಾಸಕರು, ರಾಜಕೀಯ ಮುಖಂಡರು ಮತ್ತು ನ್ಯಾಯಮೂರ್ತಿಗಳು ಸೇರಿದಂತೆ 48 ಜನರು ಸಿಲುಕಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.
ಕರ್ನಾಟಕ ಸಹಕಾರ ಸಚಿವ ಕೆಎನ್ ರಾಜಣ್ಣ ಅವರು ವಿಧಾನಸಭೆ ಅಧಿವೇಶನದಲ್ಲಿ ಹನಿಟ್ರ್ಯಾಪ್ನಲ್ಲಿ ತಮ್ಮನ್ನು ಗುರಿಯಾಗಿಸಿಕೊಂಡಿದ್ದಾರೆ ಎಂದು ಬಹಿರಂಗಪಡಿಸಿದ ನಂತರ ವಿವಾದ ಭುಗಿಲೆದ್ದಿದೆ.