ಚಿತ್ರದುರ್ಗ: ಬಬ್ಬೂರು ಫಾರಂ ಜಿಲ್ಲಾ ಕೃಷಿ ತರಬೇತಿ ಕೇಂದ್ರ ಹಾಗೂ ಹೊಳಲ್ಕೆರೆ ಕೃಷಿ ಇಲಾಖೆ ವತಿಯಿಂದ ಇದೇ ಡಿ.15ರಂದು ಬೆಳಿಗ್ಗೆ 10ಕ್ಕೆ ಹೊಳಲ್ಕೆರೆಯ ಮೈರಾಡ ಸಂಸ್ಥೆಯಲ್ಲಿ ಜಿಲ್ಲೆಯ ಕೃಷಿಕರಿಗೆ ಕೃಷಿಯಲ್ಲಿ ಜೈವಿಕ ಗೊಬ್ಬರ ಮತ್ತು ಜೈವಿಕ ಪೀಡನಾಶಕಗಳ ಬಳಕೆ ಹಾಗೂ ಅಡಿಕೆ ಸಿಪ್ಪೆಯಿಂದ ಕಾಂಪೊಸ್ಟ್ ತಯಾರಿಕೆ ಕುರಿತು ಒಂದು ದಿನದ ಹೊರಾಂಗಣ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ತರಬೇತಿ ಕಾರ್ಯಕ್ರಮದಲ್ಲಿ ಮಲ್ಟಿಪ್ಲೆಕ್ಸ್ ಬಯೋಟೆಕ್ ಪ್ರೈವೇಟ್ ತುಮಕೂರಿನ ತಾಂತ್ರಿಕ ಅಧಿಕಾರಿ ಕುಮಾರ್ ಅವರು ಕೃಷಿಯಲ್ಲಿ ಜೈವಿಕ ಗೊಬ್ಬರ ಮತ್ತು ಜೈವಿಕ ಪೀಡನಾಶಕಗಳ ಬಳಕೆ ಹಾಗೂ ಅಡಿಕೆ ಸಿಪ್ಪೆಯಿಂದ ಕಾಂಪೊಸ್ಟ್ ತಯಾರಿಕೆ ಕುರಿತು ವಿಷಯ ಮಂಡನೆ ಮತ್ತು ಪ್ರಾತ್ಯಕ್ಷಿಕೆ ನೀಡುವರು.
ಆಸಕ್ತ 50 ಜನ ರೈತಭಾಂದವರು ಈ ತರಬೇತಿಯಲ್ಲಿ ಭಾಗವಹಿಸಲು ಮೊಬೈಲ್ ಸಂಖ್ಯೆ 8277931058 ಗೆ ಕರೆಮಾಡಿ ತರಬೇತಿಯ ಸದುಪಯೋಗ ಪಡೆಯಬೇಕು ಎಂದು ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕ ಆರ್.ರಜನೀಕಾಂತ ತಿಳಿಸಿದ್ದಾರೆ.
ಮೊದಲು ನೋಂದಾವಣಿ ಮಾಡಿಕೊಂಡ 50 ಜನ ರೈತಭಾಂದವರಿಗೆ ಆದ್ಯತೆ ಮೇರೆಗೆ ತರಬೇತಿಗೆ ಪರಿಗಣಿಸಲಾಗುವುದು ಹಾಗೂ ತರಬೇತಿಗೆ ಹಾಜರಾಗುವ ರೈತಬಾಂಧವರು ಕಡ್ಡಾಯವಾಗಿ ತಮ್ಮ ಎಫ್‍ಐಡಿ ಕಾರ್ಡ್ ಅಥವಾ ಚುನಾವಣೆ ಗುರುತಿನ ಚೀಟಿಯನ್ನು ತರುವಂತೆ ಕೋರಿದೆ.































