ಬೆಂಗಳೂರು: ಕೆಲಸಗಾರರನ್ನು ಹತ್ತು ಗಂಟೆಗಳ ಕಾಲ ಕೆಲಸ ಮಾಡುವಂತೆ ಯಾವುದೇ ರೀತಿಯಲ್ಲಿ ಒತ್ತಡ ಹೇರದಂತೆ ಕಂಪೆನಿಗಳಿಗೆ ಸರ್ಕಾರ ಎಚ್ಚರಿಕೆ ನೀಡಿದೆ.
ಕೇಂದ್ರ ಸರ್ಕಾರ ಕಾರ್ಮಿಕರ ಕೆಲಸದ ಅವಧಿಯನ್ನು 10 ಗಂಟೆಗೆ ವಿಸ್ತರಿಸುವಂತೆ ಸೂಚಿಸಿ ಎಲ್ಲಾ ರಾಜ್ಯಗಳಿಗೂ ಪ್ರಸ್ತಾವನೆ ಕಳುಹಿಸಿತ್ತು. ಇದಕ್ಕೆ ಕರ್ನಾಟಕದಲ್ಲಿ ಕಾರ್ಮಿಕ ಸಂಘಗಳು ಸಾಕಷ್ಟು ವಿರೋಧ ವ್ಯಕ್ತಪಡಿಸಿದ್ದವು.
ಈ ಸಂಬಂಧ ರಾಜ್ಯ ಸರ್ಕಾರ ಮತ್ತು ಕಾರ್ಮಿಕ ಸಂಘಟನೆಗಳು ಸಾಕಷ್ಟು ಚರ್ಚೆ ನಡೆಸಿದ್ದವು. ಕಾರ್ಮಿಕರು ಈ ನೀತಿಗೆ ವಿರೋಧ ವ್ಯಕ್ತಪಡಿಸಿದರೂ, ಕೈಗಾರಿಕೋದ್ಯಮಿಗಳು ಮಾತ್ರ ಈ ನೀತಿಗೆ ವಿರೋಧ ವ್ಯಕ್ತಪಡಿಸಿಲ್ಲ. ಈ ಹಿನ್ನೆಲೆಯಲ್ಲಿ ಕಾರ್ಮಿಕರ ಹಿತದೃಷ್ಟಿಯಿಂದ ರಾಜ್ಯ ಕಾರ್ಮಿಕ ಇಲಾಖೆ ಕಾರ್ಮಿಕರಿಗೆ ಹತ್ತು ಗಂಟೆಗಳ ಕಾಲ ಕೆಲಸ ಮಾಡಲು ಒತ್ತಡ ವಹಿಸದಂತೆ ಸೂಚಿಸಿರುವುದಾಗಿದೆ.