ನವದೆಹಲಿ: ಧರ್ಮದ ಹೆಸರಿನಲ್ಲಿ ಭಯೋತ್ಪಾದನೆ ಹಾಗೂ ಆ ಮೂಲಕ ನಾಗರಿಕರನ್ನು ಕೊಲ್ಲುವುದು ಅಕ್ಷಮ್ಯ ಅಪರಾಧ ಎಂದು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೊನಿಯೊ ಗುಟೆರೆಸ್ ಹೇಳಿದ್ದಾರೆ.
ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ಧದ ಕಾರ್ಮೋಡ ಆವರಿಸಿರುವ ಹಿನ್ನೆಲೆಯಲ್ಲಿ ಮೇ 5ರಂದು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಸಭೆ ನಡೆಯಿತು. ಆ ಸಭೆಗೂ ಮುನ್ನ ಮಾತನಾಡಿದ ಗುಟೆರೆಸ್, ಭಾರತ ಮತ್ತು ಪಾಕಿಸ್ತಾನಗಳು ಯುದ್ಧದ ಮನಸ್ಥಿತಿಯಿಂದ ಆಚೆ ಬರಬೇಕು ಎಂದು ಆಗ್ರಹಿಸಿದರು.