ಧಾರವಾಡ: ಸಿದ್ದರಾಮಯ್ಯ ಸರ್ಕಾರಕ್ಕೆ ಯಾವುದೇ ತೊಂದರೆ ಇಲ್ಲ ಎಂದು ಧಾರವಾಡದಲ್ಲಿ ಕೋಡಿಮಠದ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.
ಸಂಕ್ರಾಂತಿವರೆಗೆ ಏನೂ ಹೇಳಲ್ಲ, ಸಿದ್ದರಾಮಯ್ಯ ಸರ್ಕಾರಕ್ಕೆ ಭಯವಿಲ್ಲ. ಉಳಿದದ್ದು ಸಂಕ್ರಾಂತಿ ಆದ ಮೇಲೆ ನೋಡಿ ಹೇಳಬೇಕು ಎಂದಿದ್ದಾರೆ. ಬಯಲು ಸೀಮೆಯಲ್ಲಿ ಮಲೆನಾಡು ಮಳೆ ಎಂದು ಈ ಹಿಂದೆ ಹೇಳಿದ್ದೆ. ಮಲೆನಾಡು ಬಯಲುಸೀಮೆ ಆಗಿದೆ, ಬಯಲುಸೀಮೆ ಮಲೆನಾಡು ಆಗಿದೆ ಎಂದು ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ತಿಳಿಸಿದ್ದಾರೆ.