ನವದೆಹಲಿ: ಆಪರೇಷನ್ ಸಿಂದೂರ ಕಾರ್ಯಾಚರಣೆಯ ಕುರಿತು ಸೋಮವಾರ ಭಾರತೀಯ ಸೇನಾಪಡೆಗಳ ಮುಖ್ಯಸ್ಥರು ನಡೆಸಿದಿದ್ದ ಸುದ್ದಿಗೋಷ್ಠಿಯ ವೇಳೆ ವಿರಾಟ್ ಕೊಹ್ಲಿ ಅವರ ಟೆಸ್ಟ್ ನಿವೃತ್ತಿ ಬಗ್ಗೆಯೂ ಮಾತನಾಡಲಾಯಿತು.
ಲೆಫ್ಟಿನೆಂಟ್ ಜನರಲ್ ರಾಜೀವ್ ಘಾಯ್ ಸುದ್ದಿಗೋಷ್ಠಿಯಲ್ಲಿ ಮಾತನಾಡುವ ವೇಳೆ, ಇಂದು ಕ್ರಿಕೆಟ್ ಕುರಿತು ಮಾತನಾಡುವ ದಿನವಲ್ಲ ಆದರೆ, ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್ನಿಂದ ನಿವೃತ್ತಿ ಹೊಂದಿದ್ದಾರೆ ಎಂಬ ಸುದ್ದಿಯೊಂದು ಕೇಳಿ ಬಂದಿದೆ. ಎಲ್ಲ ಭಾರತೀಯರಂತೆ ನಾನೂ ಸಹ ಅವರ ಅಭಿಮಾನಿ ಎಂದು ತಿಳಿಸಿದರು. ಸದ್ಯ ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.