ದುಬೈ : ಕಾಲಿವುಡ್ ನಟ ಅಜಿತ್ ಕುಮಾರ್ ಅವರು ನಟನಾ ಕ್ಷೇತ್ರದಲ್ಲಿ ಹೆಚ್ಚು ಜನಪ್ರಿಯತೆ ಗಳಿಸಿರುವುದಷ್ಟೇ ಅಲ್ಲದೆ ಹಲವಾರು ಸಾಧನೆಗಳನ್ನು ಮಾಡಿದ್ದಾರೆ. ವಿವಿಧ ರೇಸ್ಗಳಲ್ಲಿ ಭಾಗವಹಿಸುವ ಅವರು ವಿಮಾನ ಕೂಡ ಓಡಿಸುತ್ತಾರೆ.
ಕಾರ್ ರೇಸ್ನಲ್ಲಿ ಸಾಕಷ್ಟು ಆಸಕ್ತಿ ಇರುವ ಅವರು ಈ ಮೊದಲು ವಿವಿಧ ರೇಸ್ಗಳಲ್ಲಿ ಭಾಗವಹಿಸಿದ್ದರು. ಇದೀಗ ಅವರು ‘ದುಬೈ 24 ಅವರ್ಸ್ ರೇಸ್’ (24 ಹೆಚ್ ದುಬೈ 2025) ಸ್ಪರ್ಧೆಯಲ್ಲಿ ಅಜಿತ್ ಮೂರನೇ ಸ್ಥಾನ ಗಳಿಸಿದ್ದಾರೆ.
ಇತ್ತೀಚೆಗಷ್ಟೇ ಅಜಿತ್ ಅವರು ‘ದುಬೈ 24 ಅವರ್ಸ್ ರೇಸ್’ ಸ್ಪರ್ಧೆಯಲ್ಲಿ ಭಾಗವಹಿಸಲು ಸಿದ್ಧತೆ ನಡೆಸುತ್ತಿದ್ದರು. 6 ಗಂಟೆ ದೀರ್ಘ ಅವಧಿಯ ಪರೀಕ್ಷೆಯಲ್ಲಿ ಅಜಿತ್ ಭಾಗವಹಿಸಿದ್ದರು. ಇನ್ನೇನು 6 ಗಂಟೆಯ ಪರೀಕ್ಷೆ ಪೂರ್ಣಗೊಳ್ಳುತ್ತಿದೆ ಎನ್ನುವಾಗ ಅಜಿತ್ ಅವರ ಕಾರು ತಡೆಗೋಡೆಗೆ ಡಿಕ್ಕಿ ಹೊಡೆದಿತ್ತು. ಆದರೆ, ಅಜಿತ್ಗೆ ಗಾಯಗಳೇನು ಆಗದೆ ಅಪಾಯದಿಂದ ಪಾರಾಗಿದ್ದರು.
ಸದ್ಯ ಅಜಿತ್ ಅವರ ರೇಸಿಂಗ್ ವಿಡಿಯೋ ಸಖತ್ ವೈರಲ್ ಆಗಿದ್ದು, ಅವರು ಗೆದ್ದಿರೋದಕ್ಕೆ ಅನೇಕ ಸೆಲೆಬ್ರೆಟಿಗಳು, ಅಭಿಮಾನಿಗಳು ಅಭಿನಂದನೆ ತಿಳಿಸಿದ್ದಾರೆ. ಇನ್ನು ಅಜಿತ್ ಅವರು ದುಬೈನಲ್ಲಿ ತಮ್ಮದೇ ಆದಂತಹ ರೇಸಿಂಗ್ ತಂಡವನ್ನು ಹೊಂದಿದ್ದಾರೆ.