ಬೆಂಗಳೂರು: ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಹಂತ ಹಂತವಾಗಿ ಕರ್ನಾಟಕ ಲೋಕಸೇವಾ ಆಯೋಗದ(KPSC) ಮೂಲಕ ಭರ್ತಿ ಮಾಡಲಾಗುವುದು ಎಂದು ವಿಧಾನಪರಿಷತ್ ಸಭಾನಾಯಕ ಬೋಸರಾಜು ತಿಳಿಸಿದ್ದಾರೆ.
ವಿಧಾನಪರಿಷತ್ ನಲ್ಲಿ ಬಿಜೆಪಿ ಸದಸ್ಯ ಸಿ.ಟಿ. ರವಿ ಅವರ ಪ್ರಶ್ನೆಗೆ ಮುಖ್ಯಮಂತ್ರಿಗಳ ಪರವಾಗಿ ಉತ್ತರ ನೀಡಿದ ಅವರು, ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 2243 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. 1070 ಹುದ್ದೆಗಳಿಗೆ ಲಿಖಿತ ಪರೀಕ್ಷೆ ನಡೆಸಲು ದಿನಾಂಕ ನಿಗದಿಪಡಿಸಲಾಗಿದ್ದು, 928 ಹುದ್ದೆಗಳಿಗೆ ಲಿಖಿತ ಪರೀಕ್ಷೆ ನಿಗದಿಗೊಳಿಸಬೇಕಿದೆ ಎಂದು ಮಾಹಿತಿ ನೀಡಿದ್ದಾರೆ.