ದುಬೈ: ಐಪಿಎಲ್ 2025ರ ಮೆಗಾ ಹರಾಜಿನ 2ನೇ ದಿನದಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಟೀಂ ಇಂಡಿಯಾ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಅವರನ್ನು ಖರೀದಿಸಿದೆ. ಕೃನಾಲ್ ಪಾಂಡ್ಯ ಮಿಡ್ಲ್ ಆರ್ಡರ್‌ನಲ್ಲಿ ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ಬಲ ನೀಡಬಲ್ಲ ಪ್ಲೇಯರ್. ಹೀಗಾಗಿ ಅವರನ್ನು ಖರೀದಿಸಲು ಆರ್‌ಸಿಬಿ ಹಾಗೂ ರಾಜಸ್ಥಾನ ರಾಯಲ್ಸ್ ತಂಡಗಳ ನಡುವೆ ಜಿದ್ದಾಜಿದ್ದಿನ ಫೈಟ್ ಕಂಡು ಬಂದಿತು. ಕೊನೆಗೆ ಕೃನಾಲ್ ಪಾಂಡ್ಯ ಅವರಿಗೆ ಆರ್‌ಸಿಬಿ ಬರೋಬ್ಬರಿ 5.75 ಕೋಟಿ ರೂಪಾಯಿ ನೀಡಿ ತಂಡಕ್ಕೆ ಸೇರಿಸಿಕೊಂಡಿದೆ.
