ಬೆಂಗಳೂರು: ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಜ್ವರ ಕಾಣಿಸಿಕೊಂಡಿದೆ. ಏಕೆಂದರೆ ನಿರಂತರ ಪ್ರವಾಸ ಹಾಗೂ ಕಾರ್ಯಕ್ರಮಗಳ ಒತ್ತಡದಿಂದ ಹೀಗಾಗಿ ಅವರು ವೈದ್ಯರ ಸಲಹೆಯ ಮೇರೆಗೆ ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಇಂದು ಸಂಜೆ ಮಾಜಿ ಸಿಎಂ ಕುಮಾರಸ್ವಾಮಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದು, ಎಲ್ಲಾ ಚುನಾವಣಾ ಪ್ರಚಾರಗಳನ್ನು ಮುಂದೂಡಿದ್ದಾರೆ. ಅವಿಶ್ರಾಂತವಾಗಿ ಪ್ರವಾಸ ಮಾಡಿದ್ದ ಮಾಜಿ ಮುಖ್ಯಮಂತ್ರಿಗಳು ಜ್ವರದಿಂದ ಬಳಲುತ್ತಿದ್ದು, ಅವರಿಗೆ ವಿಶ್ರಾಂತಿ ಅಗತ್ಯವಿದೆ ಎಂದು ವೈದ್ಯರು ಸಲಹೆ ಮಾಡಿದ್ದಾರೆ.