ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು ನಿಮ್ಮಗಳ ಅವಗಾಹನೆಗೆ
ವಚನ:
ಸಂದಣಿಗೊಂಡು ಮನಹರುಷದಿಂದ ಬಸವಣ್ಣನ ಅಂಗಳಕ್ಕೆ ಹೋಗಿ
ತಿಪ್ಪೆಯ ತಪ್ಪಲಲ್ಲಿ ಬಿದ್ದಿದ್ದ ತಂಡುಲವ ಕಟ್ಟಿಕೊಂಡು
ಎಯಿದಾಗಿ ತರಲು ಎಯಿದಾಗಿ ಬಂದಿತ್ತಲ್ಲಾ?
ನಮಗೆ ಎಂದಿನಂದವೆ ಸಾಕು,
ಮತ್ತೆ ಕೊಂಡು ಹೋಗಿ ಅಲ್ಲಿಯೆ ಸುರಿ,
ಮಾರಯ್ಯಪ್ರಿಯ ಅಮಲೇಶ್ವರಲಿಂಗ ಕೊಟ್ಟ ಕಾಯಕವೆ ಸಾಕು ಮಾರಯ್ಯಾ.
-ಆಯ್ದಕ್ಕಿ ಲಕ್ಕಮ್ಮ

































