ಬೆಳಗಾವಿ : ಬಿಪಿಎಲ್ ಕಾರ್ಡ್ನಿಂದ ಎಪಿಎಲ್ ಕಾರ್ಡ್ಗೆ ವರ್ಗಾವಣೆಯಾಗಿದ್ದರೂ ಸಹ ಗೃಹ ಲಕ್ಷ್ಮೀ ಹಣ ಬಂದ್ ಆಗುವುದಿಲ್ಲ. ಬಿಪಿಎಲ್ ಜೊತೆ ಎಪಿಎಲ್ ಕಾರ್ಡ್ದಾರರಿಗೂ ನೀಡಲಾಗುತ್ತೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟಪಡಿಸಿದ್ದಾರೆ.
ರಾಜ್ಯದಲ್ಲಿ ಬಿಪಿಎಲ್ ಕಾರ್ಡ್‍ಗಳನ್ನು ರದ್ದು ಮಾಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸುದ್ದಿಗಾರೊಂದಿಗೆ ಮಾತನಾಡಿದ ಅವರು, 80 ಸಾವಿರ ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡುವ ಬದಲಿಗೆ ಎಪಿಎಲ್‍ಗೆ ಪರಿವರ್ತನೆ ಮಾಡಲಾಗಿದೆ ಎಂದರು.
ಇದರಿಂದ ಯಾವುದೇ ಗೊಂದಲ ಇಲ್ಲ, ಎಪಿಎಲ್, ಬಿಪಿಎಲ್ ಇದ್ದವರಿಗೆ ಗೃಹಲಕ್ಷ್ಮೀ ಹಣ ಬಂದೇ ಬರುತ್ತೆ . ಬಿಪಿಎಲ್ ಜೊತೆ ಎಪಿಎಲ್ ಕಾರ್ಡ್ದಾರರಿಗೂ ನೀಡಲಾಗುತ್ತೆ ಎಂದು ಹೇಳಿದರು.