ಬೆಂಗಳೂರು : ಗೃಹಲಕ್ಷ್ಮೀ ಯೋಜನೆ ಸಂಬಂಧ ರೂಪಿಸಿರುವ ಸಾಫ್ಟ್ವೇರ್ನಲ್ಲಿ ಜಿಎಸ್ಟಿ, ಆದಾಯ ತೆರಿಗೆ ಅಂತ ತೋರಿಸಿದರೆ ಬದಲಾವಣೆ ಮಾಡಲು ಸಾಧ್ಯವಿಲ್ಲ. ಇದರಲ್ಲಿ ಸರ್ಕಾರ ಅಥವಾ ಇಲಾಖೆಯ ಯಾವುದೇ ತಪ್ಪಿಲ್ಲ. ಗೃಹಲಕ್ಷ್ಮೀ ಯೋಜನೆ ನಿರಂತರ ಪ್ರಕ್ರಿಯೆ, ಈಗಲೂ ಅರ್ಜಿ ಸಲ್ಲಿಸಿದವರಿಗೆ ಹಣ ನೀಡಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.
ವಿಧಾನ ಪರಿಷತ್ ಜಿಎಸ್ಟಿ ಹಾಗೂ ಆದಾಯ ತೆರಿಗೆ ಕಟ್ಟುತ್ತಿದ್ದಾರೆ ಎಂಬ ಕಾರಣದಿಂದ ಸುಮಾರು 52 ಸಾವಿರ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆಯ ಹಣ ಸಿಗುತ್ತಿಲ್ಲ. ಈ ಪೈಕಿ ಸುಮಾರು 20 ಸಾವಿರ ಫಲಾನುಭವಿಗಳ ಸಮಸ್ಯೆಯನ್ನು ಇತ್ಯರ್ಥ ಪಡಿಸಲಾಗಿದ್ದು, ಉಳಿದವರ ಸಮಸ್ಯೆ ಸರಿಪಡಿಸಲು ಪ್ರಯತ್ನಿಸುತ್ತಿದ್ದೇವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ಹೇಳಿದರು.
ಬಿಜೆಪಿಯ ಪಿ.ಎಚ್.ಪೂಜಾರ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ರಾಜ್ಯದಲ್ಲಿ ಸುಮಾರು 1.26 ಕೋಟಿ ಗೃಹಲಕ್ಷ್ಮೀ ಫಲಾನುಭವಿಗಳಿದ್ದು, ಕೆಲ ಫಲಾನುಭವಿಗಳು ಕೆಲ ವೊಂದುವ್ಯವಹಾರನಡೆಸುವಾಗಜಿಎಸ್ಟಿ, ಆದಾಯತೆರಿಗೆವ್ಯಾಪ್ತಿಗೆ ಒಳಪಟ್ಟಿರುತ್ತಾರೆ. ಗೃಹಲಕ್ಷ್ಮೀ ಯೋಜನೆ ಸಂಬಂಧ ರೂಪಿಸಿರುವ ಸಾಫ್ಟ್ವೇರ್ನಲ್ಲಿ ಜಿಎಸ್ಟಿ, ಆದಾಯ ತೆರಿಗೆ ಅಂತ ತೋರಿಸಿದರೆ ಬದಲಾವಣೆ ಮಾಡಲು ಸಾಧ್ಯವಿಲ್ಲ. ಇದರಲ್ಲಿ ಸರ್ಕಾರ ಅಥವಾ ಇಲಾಖೆಯ ಯಾವುದೇ ತಪ್ಪಿಲ್ಲ ಎಂದರು. ಗೃಹಲಕ್ಷ್ಮೀ ಯೋಜನೆ ನಿರಂತರ ಪ್ರಕ್ರಿಯೆ, ಈಗಲೂ ಅರ್ಜಿ ಸಲ್ಲಿಸಿದವರಿಗೆ ಹಣ ನೀಡಲಾಗುವುದು ಎಂದರು.

































