ಬೆಳಗಾವಿ : ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ಮುಂದಾಗಿದ್ದ ಪಂಚಮಸಾಲಿ ಹೋರಾಟಗಾರರು ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ಮುಂದಾಗಿದ್ದ ವೇಳೆ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ.
ಮಧ್ಯಾಹ್ನ ಸುವರ್ಣ ಸೌಧ ಮುತ್ತಿಗೆ ಹಾಕಲು ಬಂದ ಹೋರಾಟಗಾರರನ್ನು ಪೊಲೀಸರು ದಾರಿಯಲ್ಲೇ ತಡೆದಿದ್ದಾರೆ. ಮುತ್ತಿಗೆ ಹಾಕಲು ಅನುಮತಿ ನೀಡುವುದಿಲ್ಲ ಎಂದು ಪೊಲೀಸರು ತಿಳಿಸಿದರೂ ಪ್ರತಿಭಟನಾಕಾರರು ಪಟ್ಟುಹಿಡಿದಿದ್ದಾರೆ.ಈ ಸಂದರ್ಭದಲ್ಲಿ ಪೊಲೀಸರ ಮೇಲೆಯೇ ಚಪ್ಪಲಿ, ಕಲ್ಲು ಬಿದ್ದಿದೆ. ಕಲ್ಲುತೂರಿದ್ದಕ್ಕೆ ಸಿಟ್ಟಾದ ಪೊಲೀಸರು ಪ್ರತಿಭಟನಾ ನಿರತರ ಮೇಲೆ ಲಾಠಿ ಬೀಸಿದ್ದಾರೆ. ಲಾಠಿ ಬೀಸುತ್ತಿದ್ದಂತೆ ಪ್ರತಿಭಟನಾ ನಿರತರು ದಿಕ್ಕಾಪಾಲಾಗಿ ಓಡಿದ್ದಾರೆ.
ಲಿಂಗಾಯತ ಪಂಚಮಸಾಲಿಗೆ 2ಎ ಮೀಸಲಾತಿಗೆ ಆಗ್ರಹಿಸಿ ಮಂಗಳವಾರ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಪಂಚಮಸಾಲಿ ಸಮುದಾಯ ಮುಂದಾಗಿತ್ತು. ಬಸವಜಯ ಮೃತ್ಯುಂಜಯ ಸ್ವಾಮೀಜಿ ಡಿಸೆಂಬರ್ 10 ರಂದು ಟ್ರ್ಯಾಕ್ಟರ್ ಮೂಲಕ ಸುವರ್ಣ ವಿಧಾನಸೌಧ ಮುತ್ತಿಗೆ ಹಾಕಲು ಕರೆ ನೀಡಿದ್ದರು.