ಚಿತ್ರದುರ್ಗ: ಕರ್ನಾಟಕ ಪ್ರಾಣಿ ಬಲಿ ನಿಷೇಧ ಕಾಯ್ದೆ ಅನ್ವಯ ದೇವಸ್ಥಾನ ಹಾಗೂ ದೇವಸ್ಥಾನದ ಅವರಣದಲ್ಲಿ ಪ್ರಾಣಿ ಬಲಿ ನೀಡುವುದು ಕಾನೂನಿಗೆ ವಿರುದ್ದವಾಗಿರುತ್ತದೆ. !
ಮಾರ್ಚ್ 16 ರಂದು ನಾಯಕನಹಟ್ಟಿಯ ಶ್ರೀ ಗುರು ತಿಪ್ಪೆರುದ್ರಸ್ವಾಮಿ ದೊಡ್ಡ ರಥೋತ್ಸವ ಜರುಗಲಿದ್ದು, ಇದಕ್ಕೆ ಪೂರಕವಾಗಿ ಮಾರ್ಚ್ 09 ರಿಂದ 17 ರವರೆಗೆ ಜಾತ್ರ ನಡೆಯಲಿದೆ. ಈ ಜಾತ್ರೆಯ ಸಂದರ್ಭದಲ್ಲಿ ದೇವಸ್ಥಾನದ ಅವರಣಕ್ಕೆ ಪ್ರಾಣಿಗಳನ್ನು ಹಾಗೂ ಮಾರಕಾಸ್ತ್ರಗಳನ್ನು ತರುವುದು, ಪ್ರಾಣಿ ಬಲಿ ನೀಡುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಟಿ. ವೆಂಕಟೇಶ ಆದೇಶ ಹೊರಡಿಸಿದ್ದಾರೆ.