ಹಾಸನ : ಕೊಟ್ಟಿಗೆಯಲ್ಲಿ ಕಟ್ಟಿದ ಕರುವಿಗೆ ಮನಸೋ ಇಚ್ಚೆ ಬಂದಂತೆ ಮಚ್ಚಿನಿಂದ ಕೊಚ್ಚಿರುವ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ, ಅರೆಕೆರೆ ಗ್ರಾಮದಲ್ಲಿ ನಡೆದಿದೆ.
ನವೀನ್ ಎಂಬುವವರಿಗೆ ಸೇರಿದ ಕರುವಿನ ಮೇಲೆ ದುರುಳರು ಮಚ್ಚಿನಿಂದ ದಾಳಿ ಮಾಡಿದ್ದು ಗಂಭೀರವಾಗಿ ಗಾಯಗೊಂಡಿರುವ ಕರು ರಕ್ತದ ಮಡುವಿಲ್ಲಿ ನರಳಾಡುತ್ತಿದೆ. ಸದ್ಯ ಕರುವಿಗೆ ವೈದ್ಯರು ಚಿಕಿತ್ಸೆ ನೀಡಿದ್ದಾರೆ. ಈ ಹಿಂದೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಮೂರು ಹಸುಗಳ ಕೆಚ್ಚಲು ಕೊಯ್ದಿದ್ದರು. ನಂತರ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನಲ್ಲಿ ಗರ್ಭಿಣಿ ಹಸುವಿನ ತಲೆ-ಕಾಲು ಕಡಿದು, ಹೊಟ್ಟೆ ಸೀಳಿ ಕರುವನ್ನೂ ಹತ್ಯೆ ಮಾಡಿ ಮಾಂಸವನ್ನು ಕೊಂಡೊಯ್ದಿದ್ದರು.