ರಾಜ್ಯದ 17 ಧಾರ್ಮಿಕ ಪೂಜಾ ಸ್ಥಳಗಳಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಲಾಗುವುದು ಎಂದುಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್ ಅವರು ಗುರುವಾರ ಹೇಳಿದ್ದಾರೆ.
ನರಸಿಂಗ್‌ಪುರ ಜಿಲ್ಲೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸಿಎಂ ಯಾದವ್, ಮದ್ಯ ಸೇವನೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಎಲ್ಲರಿಗೂ ಅರಿವಿದೆ. ಯುವಕರು ನಮ್ಮ ದೇಶದ ಭವಿಷ್ಯ. ಅವರು ಹಾಳಾಗುವುದನ್ನು ನಾವು ಬಯಸುವುದಿಲ್ಲ. ಆದ್ದರಿಂದ ನಮ್ಮ ಸರ್ಕಾರ 17 ಧಾರ್ಮಿಕ ಸ್ಥಳಗಳಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಲಿದೆ ಎಂದು ಹೇಳಿದ್ದಾರೆ.ಒಟ್ಟಿನಲ್ಲಿ ಮಧ್ಯಪ್ರದೇಶದಲ್ಲಿ ಭಗವಾನ್ ಶ್ರೀಕೃಷ್ಣ ಮತ್ತು ರಾಮ ಕಾಲಿಟ್ಟ ಕಡೆಯಲ್ಲ ಮದ್ಯ ಮರಾಟವನ್ನು ನಿಷೇಧಿಸಲಾಗುವುದು ಎಂದೂ ಅವರು ಹೇಳಿದ್ದಾರೆ.