ಚಿತ್ರದುರ್ಗ : ಈದ್ ಮಿಲಾದ್ ಹಬ್ಬ ಹಾಗೂ ಹಿಂದೂ ಮಹಾ ಗಣಪತಿ ವಿಸರ್ಜನೆ ಮೆರವಣಿಗೆ ಹಿನ್ನಲೆಯಲ್ಲಿ, ಸಾರ್ವಜನಿಕ ಶಾಂತಿ ಪಾಲನೆ, ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ವಿವಿಧ ದಿನಗಳಂದು ಬೆಳಿಗ್ಗೆ 06 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಹಲವೆಡೆ ಮದ್ಯ ಮಾರಾಟ ಮಾಡುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಆದೇಶ ಹೊರಡಿಸಿದ್ದಾರೆ.
ಸೆ.5 ರಂದು ಬೆ. 06 ರಿಂದ ಮಧ್ಯರಾತ್ರಿ 12 ರವರೆಗೆ ಈದ್ ಮಿಲಾದ್ ಹಬ್ಬ ಪ್ರಯುಕ್ತ ಚಿತ್ರದುರ್ಗ ನಗರ ಮತ್ತು ತಾಲ್ಲೂಕು ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ. ಉಳಿದಂತೆ ಜಿಲ್ಲೆಯ ವಿವಿಧ ಪ್ರದೇಶದಲ್ಲಿ ಪ್ರತಿಷ್ಠಾಪಿಸಲಾಗಿರುವ ಹಿಂದು ಮಹಾ ಗಣಪತಿ ವಿಸರ್ಜನಾ ಮೆರವಣಿಗೆ ಸಂಬಂಧ, ಸೆ.6 ರಂದು ಚಳ್ಳಕೆರೆ ನಗರ ಮತ್ತು ಸುತ್ತಮುತ್ತಲಿನ 10 ಕಿ.ಮೀ. ವ್ಯಾಪ್ತಿಯಲ್ಲಿ. ಸೆ.7 ರಂದು ಮೊಳಕಾಲ್ಮೂರು ಹಾಗೂ ಹೊಳಲ್ಕೆರೆ ಪಟ್ಟಣ ಸೇರಿದಂತೆ ಸುತ್ತಮುತ್ತಲಿನ 10 ಕಿ.ಮೀ. ವ್ಯಾಪ್ತಿಯಲ್ಲಿ. ಸೆ.8 ರಂದು ಹೊಸದುರ್ಗ ಪಟ್ಟಣ ಹಾಗೂ ಭರಮಸಾಗರ ಗ್ರಾಮ ಸೇರಿದಂತೆ ಸುತ್ತಮುತ್ತಲಿನ 10 ಕಿ.ಮೀ. ವ್ಯಾಪ್ತಿಯಲ್ಲಿ, ಹಾಗೂ ಚಿತ್ರದುರ್ಗ ನಗರದಲ್ಲಿ ಪ್ರತಿಷ್ಠಾಪಿಸಿರುವ ಹಿಂದೂ ಮಹಾ ಗಣಪತಿ ವಿಸರ್ಜನಾ ಮೆರವಣಿಗೆ ಸಂಬಂಧ ಸೆ.12 ರ ಬೆಳಿಗ್ಗೆ 06 ರಿಂದ ಸೆ. 13 ರಂದು ಮಧ್ಯರಾತ್ರಿ 12 ಗಂಟೆಯವರೆಗೆ ಜಿಲ್ಲೆಯಾದ್ಯಂತ ಮಧ್ಯ ಮಾರಾಟ ನಿಷೇಧಿಸಲಾಗಿದೆ.
ಸದರಿ ದಿನಗಳಂದು ಬೆಳಿಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಆಯಾ ಪ್ರದೇಶದ ವ್ಯಾಪ್ತಿಗೆ ಅನುಗುಣವಾಗಿ ಮದ್ಯದ ಅಂಗಡಿಗಳನ್ನು ತೆರೆಯುವಂತಿಲ್ಲ ಮದ್ಯ ಮಾರಾಟ ಮಾಡುವಂತಿಲ್ಲ. ಆದೇಶ ಉಲ್ಲಂಘಿಸಿದಲ್ಲಿ ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಅವರು ಆದೇಶದಲ್ಲಿ ತಿಳಿಸಿದ್ದಾರೆ.