ನವದೆಹಲಿ: ಪಹಲ್ಗಾಮ್ ಉಗ್ರ ದಾಳಿಯ ಹಿನ್ನೆಲೆ ಯಲ್ಲಿ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಜಮ್ಮು-ಕಾಶ್ಮೀರಕ್ಕೆ ಶುಕ್ರವಾರ ಭೇಟಿ ನೀಡ ಲಿದ್ದಾರೆ ಎಂದು ಮೂಲಗಳು ಹೇಳಿವೆ.
ಭೇಟಿಯ ವೇಳೆ ಅನಂತ್‌ನಾಗ್‌ನ ಸರಕಾರಿ ವೈದ್ಯಕೀಯ ಕಾಲೇಜಿಗೂ ರಾಹುಲ್ ಭೇಟಿ ನೀಡಲಿದ್ದಾರೆ. ಈಗಾಗಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸ್ಥಳಕ್ಕೆ ಭೇಟಿ ನೀಡಿದ್ದು, ಇಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಪಹಲ್‌ಗಾಮ್‌ಗೆ ತೆರೆಳಲಿದ್ದಾರೆ.