ಬೆಂಗಳೂರು: ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಪಿಎ ಸರ್ದಾರ್ ಸರ್ಫರಾಜ್ ಖಾನ್ ನಿವಾಸದ ಮೇಲೆ ಲೋಕಾಯುಕ್ತ ದಾಳಿ ಮುಕ್ತಾಯವಾಗಿದ್ದು, ಅವರ ಬಳಿ 14.38 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಆಸ್ತಿ ಪತ್ತೆಯಾಗಿದೆ.
ಸರ್ಫರಾಜ್ ಖಾನ್ ಅವರಿಗೆ ಸೇರಿದ 13 ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ ನಡೆದಿದೆ. ದಾಳಿಯ ವೇಳೆ 14.38 ಕೋಟಿ ರೂ. ಮೌಲ್ಯದ ಆಸ್ತಿ ಪತ್ತೆಯಾಗಿದೆ. ಸ್ಥಿರಾಸ್ತಿಯ ಮೌಲ್ಯ 8.44 ರೂ., 4 ವಾಸದ ಮನೆ, 35 ಎಕರೆ ಕೃಷಿ ಜಮೀನು ದಾಖಲೆ ಪತ್ತೆಯಾಗಿವೆ. ಅವರು 5.93 ಮೌಲ್ಯದ ಚರಾಸ್ತಿ ಹೊಂದಿದ್ದಾರೆ. 66,500 ರೂ. ಹಣ, 2.99 ಲಕ್ಷ ರೂಪಾಯಿ ಮೌಲ್ಯದ ಚಿನ್ನ, 1.29 ಕೋಟಿ ರೂಪಾಯಿ ಎಫ್.ಡಿ. ಸೇರಿ 14.38 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಪತ್ತೆಯಾಗಿದೆ ಎನ್ನಲಾಗಿದ್ದು, ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

































