ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಮುಖ ಆರೋಪಿಯಾಗಿರುವ ಮುಡಾ( ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ಭೂ ಹಗರಣದ ತನಿಖೆ ಮುಕ್ತಾಯವಾಗಿದ್ದು, ಮೈಸೂರು ಲೋಕಾಯುಕ್ತರು ನ್ಯಾಯಾಲಯಲಕ್ಕೆ ಸಲ್ಲಿಸಲು ಮುಂದಾಗಿದ್ದಾರೆ.
ಆದ್ರೆ, ತನಿಖಾ ವರದಿಯಲ್ಲಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಇತರೆ ಆರೋಪಿಗಳಿಗೆ ಕ್ಲೀನ್ಚಿಟ್ ನೀಡಲಾಗಿದೆ. ಈ ಬಗ್ಗೆ ಲೋಕಾಯುಕ್ತವು ದೂರುದಾರ ಸ್ನೇಹಮಯಿಕೃಷ್ಣಗೆ ನೋಟಿಸ್ ನೀಡಿದ್ದು, ಸಾಕ್ಷ್ಯಾಧಾರಗಳ ಕೊರತೆಯಿಂದ ತನಿಖೆಗೆ ಅರ್ಹವಲ್ಲದ ಪ್ರಕರಣ ಎನ್ನುವುದನ್ನು ತಿಳಿಸಿದೆ. ಅಲ್ಲದೇ ಬಿ ರಿಪೋರ್ಟ್ ಸಲ್ಲಿಸುವುದಾಗಿ ಮಾಹಿತಿ ನೀಡಿದ್ದಾರೆ.
ಇನ್ನು ಈ ವರದಿಯನ್ನು ವಿರೋಧಿಸುವುದಿದ್ದರೆ ತಾವು ಈ ನೋಟೀಸು ತಲುಪಿದ ಒಂದು ವಾರದೊಳಗಾಗಿ ಮ್ಯಾಜಿಸ್ಟ್ರೇಟರ್ ಎದುರು ಆ ಬಗ್ಗೆ ವಿರೋಧಿಸಬಹುದಾಗಿದೆ ಎಂದು ದೂರುದಾರ ಸ್ನೇಹಮಯಿಕೃಷ್ಣ ಅವರಿಗೆ ತಿಳಿಸಿದೆ.
ಪ್ರಕರಣದ ಆರೋಪಿ-1 ರಿಂದ ಆರೋಪಿ-4 ರವರೆಗಿನ ಮೇಲಿನ ಆರೋಪಗಳು ಸಾಕ್ಷ್ಯಾಧಾರಗಳ ಕೊರತೆಯಿಂದ ಸಾಬೀತಾಗಿಲ್ಲವಾದ್ದರಿಂದ ಅಂತಿಮ ವರದಿಯನ್ನು ಘನ ನ್ಯಾಯಾಲಯಕ್ಕೆ ಸಲ್ಲಿಸಲಾಗುತ್ತಿದೆ.