ಕಲಬುರಗಿ: ಜಿಲ್ಲೆಯ ಕಮಲಾಪುರ ತಹಶೀಲ್ದಾರ್ ಕಚೇರಿಯಲ್ಲಿ ಲಂಚ ಪಡೆಯುತ್ತಿದ್ದಾಗ ಪ್ರಥಮ ದರ್ಜೆ ಸಹಾಯಕರಾದ (ಎಫ್ಡಿಎ) ಶಶಿಕುಮಾರ್ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.!
ಜಮೀನು ದಾಖಲೆಗಳನ್ನು ನೀಡುವ ವಿಚಾರದಲ್ಲಿ ಶಶಿಕುಮಾರ್, ಪುಟ್ಟ ಕಿಶನ್ ರಾಥೋಡ್ ಎಂಬುವವರಿಂದ ಹಣ ಸ್ವೀಕರಿಸುತ್ತಿದ್ದರು. ಶಶಿಕುಮಾರ್ ಅವರು ದಾಖಲೆ ಪತ್ರಗಳನ್ನು ನೀಡಲು 20,000 ರೂ.ಗಿಂತ ಹೆಚ್ಚು ಹಣಕ್ಕೆ ಬೇಡಿಕೆ ಇಟ್ಟಿದ್ದರು.
ಈ ಕುರಿತು ಲೋಕಾಯುಕ್ತ ಪೊಲೀಸರಿಗೆ ಕಿಶನ್ ದೂರು ನೀಡಿದ್ದರು. ಲೋಕಾಯುಕ್ತ ಅಧಿಕಾರಿಗಳೊಂದಿಗೆ ದಾಳಿ ನಡೆಸಿದ ಪೊಲೀಸರು, ಹಣ ಪಡೆಯುತ್ತಿದ್ದಾಗಲೇ ಅವರನ್ನು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.!

































