ಬೆಂಗಳೂರು : ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಶಾಸಕ ಬೈರತಿ ಬಸವರಾಜ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡ ಬೆನ್ನಲ್ಲೇ ಸಿಐಡಿ ಅಧಿಕಾರಿಗಳು ಲುಕ್ಔಟ್ ನೋಟಿಸ್ ಜಾರಿಮಾಡಿದೆ. ಈ ಹಿನ್ನೆಲೆ ಬೈರತಿ ಅವರಿಗೆ ಬಂಧನ ಭೀತಿ ಎದುರಾಗಿದ್ದು, ಯಾವುದೇ ಕ್ಷಣದಲ್ಲಾದರೂ ಅರೆಸ್ಟ್ ಆಗುವ ಸಾಧ್ಯತೆಯಿದೆ.
ಕಳೆದ ಐದು ದಿನಗಳಿಂದ ಬೈರತಿ ಬಸವರಾಜ್ ನಾಪತ್ತೆಯಾಗಿದ್ದು, ಮಹಾರಾಷ್ಟ್ರ ತಮಿಳುನಾಡು, ಗೋವಾದಲ್ಲಿ ಮೂರು ವಿಶೇಷ ತಂಡಗಳು ಹುಡುಕಾಟ ನಡೆಸಿವೆ. ನಿರೀಕ್ಷಣಾ ಜಾಮೀನು ಸಿಗುವ ನಿರೀಕ್ಷೆಯಲ್ಲಿದ್ದ ಬೈರತಿ ಬಸವರಾಜ್ಗೆ ಲುಕ್ಔಟ್ ನೋಟಿಸ್ ಜಾರಿ ಮಾಡುವ ಮೂಲಕ ಅಧಿಕಾರಿಗಳು ಶಾಕ್ ನೀಡಿದ್ದಾರೆ.
ಮಂಗಳವಾರ (ಡಿ.೨೩) ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶಾಸಕ ಬೈರತಿ ಬಸವರಾಜ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಡೆಸಿತು. ವಾದ-ಪ್ರತಿವಾದಗಳನ್ನು ಆಲಿಸಿದ ಕೋರ್ಟ್ ಅರ್ಜಿಯನ್ನು ವಜಾಗೊಳಿಸಿದೆ. ಇದರ ಬೆನ್ನಲ್ಲೇ ಸಿಐಡಿ ಅಧಿಕಾರಿಗಳು ಬೈರತಿಗಾಗಿ ತೀವ್ರ ಶೋಧ ನಡೆಸುತ್ತಿದ್ದಾರೆ.

































