ಹೋಶಿಯಾರ್ಪುರ-ಜಲಂಧರ್ ರಸ್ತೆಯ ಮಂಡಿಯಾಲ ಅಡ್ಡಾ ಬಳಿ ಪಿಕಪ್ ವಾಹನಕ್ಕೆ ಡಿಕ್ಕಿ ಹೊಡೆದು ಎಲ್‌ಪಿಜಿ ಟ್ಯಾಂಕರ್ ಸ್ಫೋಟಗೊಂಡಿರುವ ಘಟನೆ ತಡರಾತ್ರಿ ನಡೆದಿದ್ದು, ದುರಂತದಲ್ಲಿ ಏಳು ಜನರು ಸಾವನ್ನಪ್ಪಿದ್ದು 15 ಮಂದಿಗೆ ಸುಟ್ಟ ಗಾಯಗಳಾಗಿವೆ. ಗಾಯಾಗೊಂಡವರನ್ನು ಆಸ್ಪತ್ರೆಗೆ ದಾಖಲಾಗಿದ್ದು, ಇವರಲ್ಲಿ ಕೆಲವರು ಈಗಾಗಲೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ತಿಳಿದುಬಂದಿದೆ
ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಆರ್ಥಿಕ ನೆರವು ಘೋಷಿಸಿದ್ದು, ಗಾಯಾಳುಗಳಿಗೆ ಉಚಿತ ವೈದ್ಯಕೀಯ ಚಿಕಿತ್ಸೆ ನೀಡುವುದಾಗಿ ಭರವಸೆ ನೀಡಿದ್ದಾರೆ.
ಪರಿಹಾರ ಮತ್ತು ತ್ವರಿತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಮಂಡಿಯಾಲ ಮತ್ತು ಪಕ್ಕದ ಹಳ್ಳಿಗಳ ನಿವಾಸಿಗಳು ಮೂರು ಗಂಟೆಗಳಿಗೂ ವಾಹನಗಳನ್ನು ತಡೆದು ಹೆಚ್ಚು ಕಾಲ ಧರಣಿ ನಡೆಸಿದ್ದಾರೆ.ಎಸ್‌ಡಿಎಂ ಗುರುಸಿಮ್ರನ್‌ಜೀತ್ ಕೌರ್ ಅವರು, ಪರಿಹಾರ ನೀಡಲಾಗುವುದು ಮತ್ತು ಹೊಣೆಗಾರರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ ನಂತರ ಪ್ರತಿಭಟನೆ ಹಿಂಪಡೆಯಲಾಗಿದೆ.