ಮೈಸೂರು: ಮಲ್ಲಿಗೆ ಭತ್ತದ ತಳಿಯನ್ನು ಅಭಿವೃದ್ಧಿಪಡಿಸಿ ರಾಷ್ಟ್ರ ಪ್ರಶಸ್ತಿ ಪುರಸ್ಕೃತರಾಗಿದ್ದ ಚನ್ನಪಟ್ಟಣದ ಅರಳಾಳುಸಂದ್ರ ಗ್ರಾಮದ ಎಂ.ಲಿಂಗಮಾದಯ್ಯ (81) ಮಂಗಳವಾರ ನಿಧನರಾಗಿದ್ದಾರೆ.
ಅವರಿಗೆ ಪತ್ನಿ, ಪುತ್ರ, ಪುತ್ರಿ ಇದ್ದಾರೆ. ಮಾಜಿ ಸೈನಿಕರಾಗಿದ್ದ ಅವರು, ಗ್ರಾಪಂ ಉಪಾಧ್ಯಕ್ಷರಾಗಿ, ಅರಳಾಳುಸಂದ್ರ ವ್ಯವಸಾಯ ಸೇವಾ ಸಹಕಾರ ಸಂಘದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಅವರು 1983ರಿಂದ ಕೃಷಿ ಮಾಡುತ್ತಿದ್ದರು. ಅವರ ಅಂತ್ಯಕ್ರಿಯೆ ಅರಳಾಳುಸಂದ್ರ ಗ್ರಾಮದಲ್ಲಿ ನಿನ್ನೆ ನಡೆಯಿತು.
































