ದೂರು ನೀಡಲು ಬಂದಿದ್ದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ಮಧುಗಿರಿ ಡಿವೈ ಎಸ್ ಪಿ ರಾಮಚಂದ್ರಪ್ಪ ವಿರುದ್ಧ ಮತ್ತೋರ್ವ ಮಹಿಳೆ ದೂರು ನೀಡಿದ್ದಾರೆ.
ಡಿವೈಎಸ್ ಪಿ ರಾಮಚಂದ್ರಪ್ಪ ವಿರುದ್ಧ ಮತ್ತೋರ್ವ ಮಹಿಳೆ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ್ದಾರೆ. ಕೊರಟಗೆರೆ ತಾಲೂಕಿನ ಮಹಿಳೆಯೊಬ್ಬರು ಮಧುಗಿರಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಿಸಿದ್ದಾರೆ.
ನಿವೇಶನ ನೀಡುವುದಾಗಿ ಹೇಳಿ ತನ್ನಿಂದ ಹಣ ಪಡೆದ ವ್ಯಕ್ತಿಯೊಬ್ಬ ನಿವೇಶನವನ್ನೂ ನೀಡದೇ, ಹಣವನ್ನೂ ವಾಪಸ್ ಕೊಡದೆ ವಂಚಿಸಿದ್ದಾನೆ. ಈ ಬಗ್ಗೆ ಆರೋಪಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಕೋರಿ ಮಹಿಳೆ ಮಹಿಳಾ ಆಯೋಗದ ಮೊರೆ ಹೋಗಿದ್ದು, ಈ ಸಂಬಂಧ ವಿಚಾರಣೆ ನಡೆಸುವಂತೆ ಮಹಿಳಾ ಆಯೋಗ ತುಮಕೂರು ಜಿಲ್ಲಾ ಪೊಲೀಸ್ ಠಾಣೆಗೆ ಕಚೇರಿಗೆ ಪತ್ರ ಬರೆದಿತ್ತು.
ಪ್ರಕರಣದ ವಿಚಾರಣೆ ನೆಪದಲ್ಲಿ ತನ್ನನ್ನು ಕಚೇರಿಗೆ ಕರೆದ ಡಿವೈ ಎಸ್ ಪಿ ರಾಮಚಂದ್ರಪ್ಪ, ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎಂದು ಮಹಿಳೆ ದೂರು ದಾಖಲಿಸಿದ್ದಾರೆ.