ಬೆಳಗಾವಿ: ಮಹಾ ಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಬೆಳಗಾವಿಯ ತಾಯಿ-ಮಗಳು ಸಾವಿಗೀಡಾಗಿದ್ದಾರೆ.ಪ್ರಯಾಗ್‌ರಾಜ್‌ನ ಮಹಾಕುಂಭ ಮೇಳದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಬೆಳಗಾವಿಯ ತಾಯಿ-ಮಗಳು ಸಾವನ್ನಪ್ಪಿದ್ದಾರೆ. ಸಾಯಿರಥ ಟ್ರಾವೆಲ್ ಏಜೆನ್ಸಿ ಮೂಲಕ ಕುಂಭಮೇಳಕ್ಕೆ ತೆರಳಿದ್ದ ಇವರು, ಸ್ನಾನಕ್ಕೆ ಹೋಗಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ಮೃತರನ್ನು ವಡಗಾವಿ ನಿವಾಸಿ ಜ್ಯೋತಿ ಹತ್ತರವಾಠ್ (50) ಮೇಘಾ ಹತ್ತರವಾಠ್ ಎಂದು ಗುರುತಿಸಲಾಗಿದೆ. ಕುಂಬಮೇಳದಲ್ಲಿ ಕಾಲ್ತುಳಿತದ ಬಳಿಕ ಇಬ್ಬರನ್ನೂ ಪ್ರಯಾಗ್‍ರಾಜ್‍ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಬ್ಬರೂ ಸಾವಿಗೀಡಾಗಿದ್ದಾರೆ. ಬೆಳಗಾವಿಯಲ್ಲಿರುವ ಕುಟುಂಬಸ್ಥರಿಗೆ ಇಂದು ಬೆಳಗ್ಗೆಯಿಂದಲೆ ಇಬ್ಬರು ಸಂಪರ್ಕಕ್ಕೆ ಸಿಕ್ಕಿರಲಿಲ್ಲ. ಟ್ರಾವೆಲ್ ಏಜೆನ್ಸಿ ಸಿಬ್ಬಂದಿ ಆಸ್ಪತ್ರೆಗೆಗಳಿಗೆ ಹೋಗಿ ಹುಡುಕಿದಾಗ ಅಲ್ಲಿ ಜ್ಯೋತಿ ಮತ್ತು ಅವರ ಮಗಳು ಮೇಘಾ ಮೃತಪಟ್ಟಿರುವುದನ್ನು ತಿಳಿದು ಬಂದಿದೆ. ನಂತರ ಅವರ ಕುಟುಂಬ ಸದಸ್ಯರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ.
				
															
                    
                    
                    
































