ಬೆಳಗಟ್ಟ: ಫೆ.19ರಂದು ಶ್ರೀಗುರು ಕರಿಬಸವೇಶ್ವರಜ್ಜಯ್ಯ ಸ್ವಾಮಿಯ ಮಹಾರಥೋತ್ಸವ

WhatsApp
Telegram
Facebook
Twitter
LinkedIn

 

ಚಿತ್ರದುರ್ಗ: ತಾಲ್ಲೂಕಿನ ಬೆಳಗಟ್ಟ ಗ್ರಾಮದಲ್ಲಿ ಶ್ರೀ ಗುರು ಕರಿಬಸವೇಶ್ವರಜ್ಜಯ್ಯ ಸ್ವಾಮಿಯ 25ನೇ ವರ್ಷದ ಮಹಾರಥೋತ್ಸವ ಇದೇ ಫೆ.19ರಂದು ಬೆಳಿಗ್ಗೆ 10.30ಕ್ಕೆ ಜರುಗಲಿದೆ. ರಥೋತ್ಸವದ ನಂತರ ಸಾಧಕರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ ಮತ್ತು ಜ್ಞಾನದಾಸೋಹ ಕಾರ್ಯಕ್ರಮ ಏರ್ಪಡಿಸಲಾಗಿದೆ.

ಬೆಳಗಟ್ಟ ಗ್ರಾಮದಲ್ಲಿರುವ ಶ್ರೀ ಗುರು ಕರಿಬಸವೇಶ್ವರಜ್ಜಯ್ಯ ಸ್ವಾಮಿ ಮಠದಲ್ಲಿ ಪವಾಡಪುರುಷ ಶ್ರೀಗುರುಕರಿಬಸವೇಶ್ವರಜ್ಜಯ್ಯಸ್ವಾಮಿಯ ಪೂಜೆ, ಆರಾಧನೆಯ ಜೊತೆಗೆ ಧಾರ್ಮಿಕ, ಆಧ್ಯಾತ್ಮಿಕ ಮತ್ತು ಸಾಮಾಜಿಕ ಸೇವೆಯು ಸುಮಾರು ನಾಲ್ಕು ದಶಕಗಳಿಂದ ನಡೆಯುತ್ತಾ ಬಂದಿದೆ. ಪ್ರತಿ ಸೋಮವಾರ, ಗುರುವಾರ, ಅಮಾವಾಸ್ಯೆ, ಹುಣ್ಣಿಮೆಗಳಲ್ಲಿ ತ್ರಿವಿಧ ದಾಸೋಹ ಕಾರ್ಯಕ್ರಮಗಳು ಜರುಗುತ್ತವೆ.

ಧಾರ್ಮಿಕ, ಆಧ್ಯಾತ್ಮಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಕ್ಷೇತ್ರಗಳಲ್ಲಿ ಅಪೂರ್ವವಾದ ಮತ್ತು ಅನನ್ಯವಾದ ಸೇವೆ ಸಲ್ಲಿಸಿರುವ ಮತ್ತು ಸಲ್ಲಿಸುತ್ತಿರುವ ಕೊಪ್ಪಳ ಗವಿಮಠದ ಗವಿಸಿದ್ದೇಶ್ವರ ಮಹಾಸ್ವಾಮಿಗಳು, ಚಿತ್ರದುರ್ಗ ಸದ್ಗುರು ಕಬೀರಾನಂದಾಶ್ರಮದ ಪೀಠಾಧ್ಯಕ್ಷರಾದ ಶಿವಲಿಂಗಾನಂದ ಮಹಾಸ್ವಾಮಿಗಳು, ರಾಜನಹಳ್ಳಿ ಶ್ರೀ ವಾಲ್ಮೀಕಿ ಗುರುಪೀಠದ ಪೀಠಾಧ್ಯಕ್ಷರಾದ ಪ್ರಸನ್ನಾನಂದಸ್ವಾಮಿಗಳು, ಆಂದ್ರಪ್ರದೇಶದ ಉರವಕೊಂಡದ ಕರಿಬಸವರಾಜೇಂದ್ರ ಮಹಾಸ್ವಾಮಿಗಳು ದಿವ್ಯಸಾನಿಧ್ಯ ವಹಿಸಿ, ಪ್ರವಚನ ಮಾಡುವರು. ಶ್ರೀಗುರು ಕರಿಬಸವೇಶ್ವರಜ್ಜಯ್ಯಸ್ವಾಮಿ ಮಠದ ಪೀಠಾಧ್ಯಕ್ಷರಾದ ಅಮ್ಮ ಮಹದೇವಮ್ಮ ಅವರು ಅಧ್ಯಕ್ಷತೆ ವಹಿಸುವರು. ಸಂಸದರಾದ ಗೋವಿಂದ ಎಂ. ಕಾರಜೋಳ,  ಶಾಸಕರಾದ ಟಿ.ರಘುಮೂರ್ತಿ, ಕೆ.ಸಿ.ವೀರೇಂದ್ರ (ಪಪ್ಪಿ) ಮಾಜಿ ಮಂತ್ರಿಗಳಾದ ಬಿ. ಶ್ರೀರಾಮುಲು  ಉದ್ಘಾಟಿಸುವರು.

ಮುಖ್ಯ ಅತಿಥಿಗಳಾಗಿ ಶಾಸಕರಾದ ಎಂ.ಚಂದ್ರಪ್ಪ, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾಸ್ವಾಮಿ, ಗಣ್ಯರಾದ ಎನ್. ತಿಪ್ಪೇಸ್ವಾಮಿ, ಕೆ.ಸಿ. ನಾಗರಾಜ್, ಅನಿತ್ ಕುಮಾರ್, ಬಿ.ಟಿ.ಸಿದ್ದೇಶ್, ಬಿ.ತಿಮ್ಮಪ್ಪ, ಚಂದ್ರಶೇಖರ್, ಯುಗಧರ್ಮರಾಮಣ್ಣ, ಡಾ.ನಾಗೇಂದ್ರ ಆಚಾರ್ಯ, ಶಶಿಧರಗುಪ್ತ, ಪಾಪೇಶ ನಾಯಕ, ವಿ.ಎಲ್. ಪ್ರಶಾಂತ್, ಅರುಣಾಚಲಮೂರ್ತಿ ಸೇರಿದಂತೆ ಮತ್ತಿತರೆ ಗಣ್ಯರು ಭಾಗವಹಿಸುವರು ಎಂದು ಅರ್ಚಕರಾದ ಟಿ.ನಾಗೇಶ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BC Suddi   About Us
BC Suddi Bcsuddi is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World. Read More
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon