ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಪ್ರಕರಣದಲ್ಲಿ ಬಂಧಿತರಾಗಿರುವ ಮಹೇಶ್ ಶೆಟ್ಟಿ ತಿಮರೋಡಿಗೆ ಜಾಮೀನು ಮಂಜೂರಾಗಿದೆ.
ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾಗಿ ಹಿರಿಯಡ್ಕದ ಜೈಲಿನಲ್ಲಿದ್ದ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಿಗಿ ಭದ್ರತೆಯಲ್ಲಿ ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಕರೆ ತರಲಾಯಿತು.
ನ್ಯಾಯಾಲಯದಲ್ಲಿ ಬ್ರಹ್ಮಾವರ ಪೊಲೀಸರು ತಿಮರೋಡಿಯನ್ನು ಕಸ್ಟಡಿಗೆ ನೀಡುವಂತೆ ಮನವಿ ಸಲ್ಲಿಸಿದ್ದು, ಅದರಂತೆ 2 ಗಂಟೆಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿತ್ತು. ವೈದ್ಯಕೀಯ ಪರೀಕ್ಷೆ ನಡೆಸಿ, ವಿಚಾರಣೆ ನಡೆಸಿದ ಬಳಿಕ ಪೊಲೀಸರು ನಾಲ್ಕು ಗಂಟೆ ಸುಮಾರಿಗೆ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.
ನ್ಯಾಯಾಲಯದಲ್ಲಿ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಧೀಶರು, ಮಹೇಶ್ ಶೆಟ್ಟಿ ತಿಮರೋಡಿಗೆ ಜಾಮೀನು ಮಂಜೂರು ಮಾಡಿದ್ದಾರೆ.