ಬೆಳ್ತಂಗಡಿ ತಾಲೂಕಿನ ಉಜಿರೆಯ ಬೆನಕ ಆಸ್ಪತ್ರೆ ಆವರಣದಲ್ಲಿ ಆಗಸ್ಟ್ 6 ರಂದು ರಾತ್ರಿ ಖಾಸಗಿ ಸುದ್ದಿವಾಹಿನಿಯ ತಂಡದ ಮೇಲೆ ಹಲ್ಲೆ ನಡೆದ ಘಟನೆಗೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಹಲ್ಲೆಗೊಳಗಾದವರು ಖಾಸಗಿ ಸುದ್ದಿವಾಹಿನಿಯ ವರದಿಗಾರ ಹರೀಶ್ ಮತ್ತು ಕ್ಯಾಮರಾಮೆನ್ ನವೀನ್ ಪೂಜಾರಿ.
ಧರ್ಮಸ್ಥಳದಲ್ಲಿ ಯೂಟ್ಯೂಬರ್‌ಗಳ ಮೇಲೆ ನಡೆದ ಹಲ್ಲೆ ವಿಷಯದ ವರದಿಗಾಗಿ ಈ ತಂಡವು ಬೆನಕ ಆಸ್ಪತ್ರೆಗೆ ತೆರಳಿತ್ತು. ಈ ಸಂದರ್ಭದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ಸಮೀರ್ ಎಂ.ಡಿ.. ಜಯಂತ್ ಟಿ. ಸೇರಿದಂತೆ ಇತರರ ಗುಂಪು ತಂಡದ ಮೇಲೆ ದಾಳಿ ನಡೆಸಿದೆ ಎಂದು ವರದಿಗಾರ ಹರೀಶ್ ನೀಡಿದ ದೂರಿನ ಆಧಾರದ ಮೇಲೆ, ಬಿಎನ್ಎಸ್ ಕಾಯಿದೆಯ ಸೆಕ್ಷನ್ 115(2). 189(2), 191(2) 351(2) 352, ಮತ್ತು 190ರ ಅಡಿಯಲ್ಲಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.