ಮಂಗಳೂರು : ಬಂಟ್ವಾಳ ತಾಲೂಕಿನ ಕೂರಿಯಾಳ ಸಮೀಪದ ಇರಾಕೋಡಿಯ ಕೊಳತ್ತಮಜಲ್ ನಿವಾಸಿ ಅಬ್ದುಲ್ ರಹಿಮಾನ್ ಹತ್ಯೆಗೆ ಸಂಬಂಧಪಟ್ಟು ದೀಪಕ್ ಸಹಿತ ಮೂವರನ್ನು ಪೊಲೀಸರು ವಶಕ್ಕೆ ಪಡೆದಿರುವುದಾಗಿ ತಿಳಿದು ಬಂದಿದೆ.
ಕೊಲೆ ಕೃತ್ಯದಲ್ಲಿ ಸುಮಾರು 15 ಮಂದಿ ಭಾಗಿಯಾಗಿದ್ದಾರೆ ಎನ್ನಲಾಗುತ್ತಿದ್ದು, ಕೃತ್ಯ ನಡೆದ ಬಳಿಕ ಆರೋಪಿಗಳು ಪರಾರಿಯಾಗಿದ್ದಾರೆ. ಆ ಪೈಕಿ ಮೂವರನ್ನು ಪೊಲೀಸರು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.