ಬೆಂಗಳೂರು ಹಾಗೂ ಮಂಗಳೂರು ನಡುವೆ ವಂದೇ ಭಾರತ್ ರೈಲು ಸಂಚಾರ ಸಂಬಂಧ 33 ಕಿಮೀ ವಿದ್ಯುತ್ ಕಾಮಗಾರಿ ಬಾಕಿ ಇದ್ದು, 2026ರ ಫೆಬ್ರವರಿ ಒಳಗೆ ಪೂರ್ಣಗೊಳಿಸಿ ಲೋಕಾರ್ಪಣೆಗೊಳಿಸಲು ಉದ್ದೇಶಿಸಲಾಗಿದೆ ಎಂದು ರಾಜ್ಯ ರೈಲ್ವೆ ಮತ್ತು ಜಲ ಶಕ್ತಿ ಕೇಂದ್ರ ಸಚಿವ ವಿ. ಸೋಮಣ್ಣ ತಿಳಿಸಿದರು.
ನಗರದ ಜಿಲ್ಲಾಕಾರಿ ಕಚೇರಿಯಲ್ಲಿ ಶುಕ್ರವಾರ ಸಂಜೆ ರೈಲ್ವೆ ಹಾಗೂ ಕೆಪಿಟಿಸಿಎಲ್ ಹಿರಿಯ ಅಧಿಕಾರಿಗಳ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು.