ಮಂಗಳೂರು: ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಲುವಾಗಿ ನಗರಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿಜೆಪಿ ಉತ್ತರ ಮಂಡಲ ಕಾರ್ಯಕರ್ತರಿಂದ ಕಪ್ಪು ಬಾವುಟ ಪ್ರದರ್ಶನ ಮಾಡಿದ ಘಟನೆ ನಡೆಯಿತು.
ರೌಡಿ ಶೀಟರ್ ಹಾಗೂ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆಯಲ್ಲಿ ಪಿ ಎಫ್ ಐ ಸಂಘಟನೆ ಕೈವಾಡದ ಶಂಕೆ ಇದ್ದು ಘಟನೆಯನ್ನು ಎನ್ ಐ ಎ ತನಿಖೆಗೆ ನೀಡುವಂತೆ ಹಾಗೂ ಸುಹಾಸ್ ಶೆಟ್ಟಿ ಕುಟುಂಬಕ್ಕೆ ಸರಕಾರದಿಂದ ಪರಿಹಾರ ನೀಡುವಂತೆ ಆಗ್ರಹಿಸಿ ಕಪ್ಪು ಬಾವುಟ ಪ್ರದರ್ಶನ ನಡೆಯಿತು. ಈ ವೇಳೆ ಪ್ರತಿಭಟನಾ ನಿರತ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು.