ಮಂಗಳೂರು : ಪಾಣೆಮಂಗಳೂರು ಅಕ್ಕರಂಗಡಿ ನಿವಾಸಿ ಹಮೀದ್ ಎಂಬುವರಿಗೆ ಚಾಕುವಿನಿಂದ ಇರಿದು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ನಿನ್ನೆ ರಾತ್ರಿ ನಡೆದಿದೆ.ಇರಿತದಿಂದ ಹಮೀದ್ ಅವರ ಕೈಗೆ ಆಳವಾದ ಗಂಭೀರ ಗಾಯಗೊಂಡಿದ್ದು ಮಂಗಳೂರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ.
ಬೈಕ್ ನಿಂದ ಬಂದ ದುಷ್ಕರ್ಮಿಗಳು ಚಾಕು ಹಾಕಿ ಪರಾರಿಯಾಗಿದ್ದಾರೆ. ದಾಳಿಗೆ ಸಂಬಂಧಿಸಿ ತನಿಖೆ ಆರಂಭಿಸಿದ್ದು ವೈಯಕ್ತಿಕ ದ್ವೇಷಕ್ಕೆ ಹಲ್ಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಘಟನೆ ಸ್ಥಳಕ್ಕೆ ಬಂಟ್ವಾಳ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.